ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು; ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್.ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ಇದೀಗ ನೇಮಕ ಮಾಡಲಾಗಿದೆ.
ಬೆಂಗಳೂರು;ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್.ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ಇದೀಗ ನೇಮಕ ಮಾಡಲಾಗಿದೆ.
ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ಪೊಲೀಸ್ ಕಂಪ್ಯೂಟರ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೌಮೇಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಿ ರಾಜ್ಯ ಸರಕಾರ ಆದೇಶವನ್ನು ಹೊರಡಿಸಿದೆ.