ಎರ್ಮಾಳು ಕಿನಾರಾ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಶಾಲಾ ಸಂಸತ್ತು ಉದ್ಘಾಟನೆ
(Yermal) ಎರ್ಮಾಳು: ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಕಿನಾರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಶಾಲಾ ಸಂಸತ್ತು ರಚನೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಾಲೆಯ ಮಾಜಿ ಸಂಚಾಲಕರಾದ ಶ್ರೀಯುತ ಮಾಧವ ಸುವರ್ಣ ರವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಯೋಗ ತರಬೇತುದಾರರಾದ ಸಂತೋಷ್ ಶೆಟ್ಟಿ ಪಡುಬಿದ್ರಿಯವರು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿದರು.
ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಕಿಶೋರ್ ಕುಮಾರ್, ಶಾಲಾ ಸಂಸತ್ತಿನ ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಕೋಶಾಧಿಕಾರಿ ಪ್ರಭಾಕರ್ ಪುತ್ರನ್, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪ್ರೀತಿ ಸುವರ್ಣ, ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 9ನೇ ತರಗತಿಯ ವಿದ್ಯಾರ್ಥಿಗಳಾದ ತನ್ವಿ ಎಂ. ಪುತ್ರನ್ ಸ್ವಾಗತಿಸಿದರು. ನಿತ್ಯಶ್ರೀ ಎಚ್ ಕಾರ್ಯಕ್ರಮ ನಿರೂಪಿಸಿದರು. ಅಪ್ಪಾಜಿ ವಂದಿಸಿದರು.

