ಎರ್ಮಾಳು : ಕೊರಿಯರ್ ಸರ್ವೀಸ್ ಯುವಕನಿಗೆ ಕಾರು ಡಿಕ್ಕಿ, ಗಂಭೀರ
(Yermal) ಎರ್ಮಾಳು: ಕೊರಿಯರ್ ಸರ್ವೀಸ್ ಯುವಕನಿಗೆ ಕಾರೊಂದು ಡಿಕ್ಕಿ ಹೊಡೆದು ಗಂಭಿರವಾಗಿ ಗಾಯಗೊಂಡ ಘಟನೆ ಎರ್ಮಾಳು ಶ್ರೀ ಜನಾರ್ಧನ ದೇವಸ್ಥಾನದ ಎದುರು ರಾಹೆ ೬೬ರಲ್ಲಿ ಮಂಗಳವಾರ ಮದ್ಯಾಹ್ನ ಸಂಭವಿಸಿದೆ.
ಕೊರಿಯರ್ ಸರ್ವೀಸ್ ಯುವಕನನ್ನು ಅದಮಾರು ಕೆಮುಂಡೇಲು ಗಣೇಶ್ ಆಚಾರ್ಯರವರ ಮಗ ಶರಣ್ ಆಚಾರ್ಯ ಎಂದು ಗುರುತಿಸಲಾಗಿದೆ.
ತೀವ್ರ ಗಾಯಗೊಂಡ ಯುವಕನನ್ನು ಉಚ್ಚಿಲದ ಎಸ್‌ಡಿಪಿಐ ಅಂಬುಲೆನ್ಸ್‌ನಲ್ಲಿ ಸಾರ್ವಜನಿಕರ ಸಹಕಾರದಲ್ಲಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಪಡುಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಘಟಿಸಿದೆ.

