• Home  
  •  ಎರ್ಮಾಳು: ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಆಯೋಜನೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Yermala: Free health check-up camp organized by Fishermen’s Primary Cooperative Society)
- health

 ಎರ್ಮಾಳು: ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಆಯೋಜನೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Yermala: Free health check-up camp organized by Fishermen’s Primary Cooperative Society)

Share: ಎರ್ಮಾಳು: ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಆಯೋಜನೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Yermal) ಎರ್ಮಾಳು : ಎರ್ಮಾಳು ಬಡಾ  ಮೀನುಗಾರರ ಪ್ರಾಥಮಿಕ ಸಹಕಾರ ಸಂಘ (ನಿ.) ಎರ್ಮಾಳು ಬಡಾ, ಎ ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ ಮಂಗಳೂರು, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಕುಂಟಿಕಾನ ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಜಂಟಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ಎರ್ಮಾಳು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಜರಗಿತು.  ಕಾರ್ಯಕ್ರಮವನ್ನು […]

(Yermal) ಎರ್ಮಾಳು : ಎರ್ಮಾಳು ಬಡಾ  ಮೀನುಗಾರರ ಪ್ರಾಥಮಿಕ ಸಹಕಾರ ಸಂಘ (ನಿ.) ಎರ್ಮಾಳು ಬಡಾ, ಎ ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ ಮಂಗಳೂರು, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಕುಂಟಿಕಾನ ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಜಂಟಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ಎರ್ಮಾಳು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಜರಗಿತು.

 ಕಾರ್ಯಕ್ರಮವನ್ನು ದ.ಕ ಮೊಗವೀರ ಮಹಾಜನಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ ಉದ್ಘಾಟಿಸಿದರು.

ಅವರು ಮಾತನಾಡಿ, ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರ ಸಂಘವು ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಆರೋಗ್ಯ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ. ಜನರು ಆರೋಗ್ಯ ಶಿಬಿರಗಳ ಸದುಪಯೋಗಪಡಿಸಿಕೊಂಡು ಆರೋಗ್ಯದ ಬಗೆಗೆ ಜಾಗೃತರಾಗಬೇಕು ಎಂದು ಹೇಳಿದರು.

 ಉದ್ಯಮಿ ಶೇಖರ  ಆರ್ ಸಾಲ್ಯಾನ್, ಶಿಬಿರದ ಉಸ್ತುವಾರಿ ಎ.ಜೆ. ಆಸ್ಪತ್ರೆ ವೈದ್ಯ ಡಾ. ಮಯೂರ್ ರೈ, ಡಾ. ಸಂಸ್ಕೃತಿ ಶೆಟ್ಟಿ, ಡಾ. ಆರತಿ ಮಾತನಾಡಿದರು.

  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾದ ದಿನೇಶ್ ಕೋಟ್ಯಾನ್ ವಹಿಸಿದ್ದರು.

ಕಾರ್ಯಕ್ರಮವನ್ನು ಪ್ರಿಯಾಂಕ ಸಂತೋಷ್ ನಿರೂಪಿಸಿ, ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.