• Home  
  • ಎರ್ಮಾಳು : ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿಯಿಂದ ಧರೆಗೆ ಉರುಳಿದ ಕಾರು,  ಓರ್ವ ಸಾವು (Yermal : Car crashes into electric pole, rolls off highway, one dead)
- ಅಪಘಾತ

ಎರ್ಮಾಳು : ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿಯಿಂದ ಧರೆಗೆ ಉರುಳಿದ ಕಾರು,  ಓರ್ವ ಸಾವು (Yermal : Car crashes into electric pole, rolls off highway, one dead)

Share: ಎರ್ಮಳು : ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿಯಿಂದ ಧರೆಗೆ ಉರುಳಿದ ಕಾರು,  ಓರ್ವ ಸಾವು ಮೃತರನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿ ಎಂದು ಗುರುತಿಸಲಾಗಿದೆ (Padubidri) ಪಡುಬಿದ್ರಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೋಟಕ್ಕೆ ಉರುಳಿ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ಘಟಸಿದೆ.  ಮೃತ ವ್ಯಕ್ತಿಯನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿ […]

(Padubidri) ಪಡುಬಿದ್ರಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೋಟಕ್ಕೆ ಉರುಳಿ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ಘಟಸಿದೆ.

 ಮೃತ ವ್ಯಕ್ತಿಯನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿ ಎಂದು ಗುರುತಿಸಲಾಗಿದೆ.

   ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ.

   ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಧರಾಶಾಯಿಯಾಗಿ, ಕಾರು ನಜ್ಜುಗುಜ್ಜಾಗಿದೆ. ಈ ಸಂದರ್ಭ ವಿದ್ಯುತ್ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಕೂಡಲೇ ಅಭಿಯವರನ್ನು  ಸ್ಥಳೀಯರ ಸಹಕಾರದಿಂದ ಆತನ ಸ್ನೇಹಿತರು ಮುಕ್ಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟದ್ದಾರೆಂದು ತಿಳಿದು ಬಂದಿದೆ.

   ಶ್ರಮ ಜೀವಿಯಾಗಿದ್ದ ಅಭಿ ಕಷ್ಟದಿಂದ ಮೇಲೆ ಬಂದು ತನ್ನದೇ ಇವೆಂಟ್ ತಂಡ ಕಟ್ಟಿಕೊಂಡಿದ್ದರು ಎಂದು ತಿಳಿದು ಬಂದಿದೆ.

  ಘಟನಾ ಸ್ಥಳಕ್ಕೆ ಹೆಜಮಾಡಿ ಟೋಲ್ ಸಿಬ್ಬಂದಿ ಮತ್ತು ಪಡುಬಿದ್ರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.