ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಿಸಲಾಗಿದ್ದು, ಶುಕ್ರವಾರ ಬೆಳಿಗ್ಗೆಅದಮಾರು ಮಠದ ಶ್ರೀ ಈಶಪ್ರಿಯ ಶ್ರೀಪಾದರು ಚಾಲನೆ ನೀಡಿದರು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ ಪೂಜೆ ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ, ಇದು ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ ಯೋಜನೆ ಇಂದು ನನಸಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಲಾಲಾಜಿ ಆರ್ ಮೆಂಡನ್, ಎಲ್ಲರೂ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತ್ ಕುಮಾರ್, ಕಾಪು ತಹಶೀಲ್ದಾರರಾದ ಶ್ರೀನಿವಾಸ ಕುಲಕರ್ಣಿ, ಕಂದಾಯ ನಿರೀಕ್ಷಕರಾದ ಸುಧೀರ್ ಶೆಟ್ಟಿ, ಕಾಪು ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ. ಅರುಣ್ ಹೆಗ್ಡೆ, ಪಶು ವೈದ್ಯಾಧಿಕಾರಿಗಳಾದ ಡಾ. ವಿಜಯ ಕುಮಾರ್, ಕಾಪು ತಾಲ್ಲೂಕು ಪಂಚಾಯತ್ ಸಹಾಯಕ ಅಭಿಯಂತರರಾದ ಚಂದ್ರಕಲಾ, ಎಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರದೀಪ್, ವೀಣಾ ಶೆಟ್ಟಿ, ಶಿಲ್ಪಾ ಜಿ ಸುವರ್ಣ, ಕೇಶವ ಮೊಯ್ಲಿ , ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮದ ನಿರೂಪಿಸಿದರು.

