• Home  
  •  ಎಲ್ಲೂರು ಗ್ರಾಮ ಪಂಚಾಯತ್‌ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ (Closing Ceremony of Bharatha Sankalp Yathre)
- ರಾಜಕೀಯ

 ಎಲ್ಲೂರು ಗ್ರಾಮ ಪಂಚಾಯತ್‌ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ (Closing Ceremony of Bharatha Sankalp Yathre)

Share: ಎಲ್ಲೂರು ಗ್ರಾಮ ಪಂಚಾಯತ್‌ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ     ಕಾಪು: ಪ್ರಧಾನ ಮಂತ್ರಿ  ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ   ನಡೆದ “ವಿಕಸಿತ ಭಾರತ ಸಂಕಲ್ಪ ಯಾತ್ರೆ” ಯ ಸಮಾರೋಪ ಸಮಾರಂಭ  ಎಲ್ಲೂರೂ ಗ್ರಾಮ ಪಂಚಾಯತ್ ಬಳಿ ನಡೆಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme Suresh Shetty) ಅವರು ದೀಪ ಬೆಳಗಿಸುವ ಮೂಲಕ ಸಭಾ ಕಾರ್ಯಕ್ರಮನ್ನು ಉದ್ಘಾಟಿಸಿ ಬಳಿಕ ಮುದ್ರಾ […]

ಎಲ್ಲೂರು ಗ್ರಾಮ ಪಂಚಾಯತ್‌ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ  

  ಕಾಪು: ಪ್ರಧಾನ ಮಂತ್ರಿ  ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ   ನಡೆದ “ವಿಕಸಿತ ಭಾರತ ಸಂಕಲ್ಪ ಯಾತ್ರೆ” ಯ ಸಮಾರೋಪ ಸಮಾರಂಭ  ಎಲ್ಲೂರೂ ಗ್ರಾಮ ಪಂಚಾಯತ್ ಬಳಿ ನಡೆಯಿತು.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme Suresh Shetty) ಅವರು ದೀಪ ಬೆಳಗಿಸುವ ಮೂಲಕ ಸಭಾ ಕಾರ್ಯಕ್ರಮನ್ನು ಉದ್ಘಾಟಿಸಿ ಬಳಿಕ ಮುದ್ರಾ ಯೋಜನೆ ಅಡಿಯಲ್ಲಿ ಮಂಜೂರಾದ ಸಾಲ ಸೌಲಭ್ಯದ ಆದೇಶ ಪತ್ರವನ್ನು ಹಾಗೂ ಆಯುಷ್ಮಾನ್ ಕಾರ್ಡ್ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕಗಳನ್ನು ಫಲಾನುಭವಿಗಳಿಗೆ ವಿತರಿಸಿದರು.

 ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ(MLC Kota Shrinivasa Poojary), ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ  ರವಿರಾಜ್ ರಾವ್, ಉಪಾಧ್ಯಕ್ಷೆ ಶ್ರೀಮತಿ ಉಷಾ, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಜಿಲ್ಲಾ ಪ್ರಭಾರಿ ಶೊಯ್ಯಬ್ ಅಹಮ್ಮದ್ ಕಲಾಲ್, ನಬಾರ್ಡ್ ನ ಸಂಗೀತಾ ಕರ್ತ, ಲೀಡ್ ಬ್ಯಾಂಕ್ ಪ್ರಬಂಧಕ ಬೀರ್ ಸಾಬ್ ಪಿಂಜಾರ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ನೋಡಲ್ ಅಧಿಕಾರಿ ಸಚಿನ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಡಾ. ಧನಂಜಯ್, ಕೃಷಿ ಇಲಾಖೆಯ ವೆಂಕಟೇಶ್, ರುಡ್ ಸೆಟ್ ಸಂಸ್ಥೆಯ ಕರುಣಾಕರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತಾಧಿಕಾರಿಗಳು, ಎಲ್ಲೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.