• Home  
  • ಎಲ್ಲೆಡೆ ಬೆಳಗಲಿ ಹಣತೆಯ ದಿವ್ಯ ಪ್ರಭಾವಳಿ ಮತ್ತೆ ಬಂದಿದೆ ದೀಪಾವಳಿ (May the divine light of Diwali shine everywhere. Diwali has come again)
- fastival

ಎಲ್ಲೆಡೆ ಬೆಳಗಲಿ ಹಣತೆಯ ದಿವ್ಯ ಪ್ರಭಾವಳಿ ಮತ್ತೆ ಬಂದಿದೆ ದೀಪಾವಳಿ (May the divine light of Diwali shine everywhere. Diwali has come again)

Share:  ಎಲ್ಲೆಡೆ ಬೆಳಗಲಿ ಹಣತೆಯ ದಿವ್ಯ ಪ್ರಭಾವಳಿ ಮತ್ತೆ ಬಂದಿದೆ ದೀಪಾವಳಿ    ವಿಶೇಷ ಲೇಖನ : ರಾಘವೇಂದ್ರ ಪ್ರಭು ಕವಾ೯ಲು    ದೀಪಾವಳಿ ಹಬ್ಬವು ಕೇವಲ ಹಬ್ಬವಲ್ಲ ಇದು ಜನಸಾಮಾನ್ಯರ ಸಂತೋಷದ ಕ್ಷಣವೆಂದರೆ ತಪ್ಪಾಗಲಾರದು. ಇದು ಧನ ತ್ರಯೋದಶಿಯಿಂದ ಆರಂಭಿಸಿ ಅಮಾವಾಸ್ಯೆ ದಾಟಿ ಬಿದಿಗೆವರೆಗೂ ಈ ಸಡಗರ ವಿಸ್ತರಿಸುತ್ತದೆ.     ನವರಾತ್ರಿ ಉಕ್ಕಿಸಿದ ನವಸಡಗರ  ಮನಸ್ಸಲ್ಲಿನ್ನೂ ಹಿತವಾಗಿ ಹರಡಿಕೊಂಡಿರುವಂತೆ, ಮುಸ್ಸಂಜೆಯ ಮುದ್ದಾದ ಮಳೆ, ಚೂರುಚೂರೇ ಆವರಿಸಿಕೊಳ್ಳುತ್ತಾ ಖುಷಿ ಕೊಡುವ ಚಳಿಯ ನಡುವೆ ಮತ್ತೊಂದು ಸಂಭ್ರಮ ಬಂದಿದೆ. […]

   ದೀಪಾವಳಿ ಹಬ್ಬವು ಕೇವಲ ಹಬ್ಬವಲ್ಲ ಇದು ಜನಸಾಮಾನ್ಯರ ಸಂತೋಷದ ಕ್ಷಣವೆಂದರೆ ತಪ್ಪಾಗಲಾರದು. ಇದು ಧನ ತ್ರಯೋದಶಿಯಿಂದ ಆರಂಭಿಸಿ ಅಮಾವಾಸ್ಯೆ ದಾಟಿ ಬಿದಿಗೆವರೆಗೂ ಈ ಸಡಗರ ವಿಸ್ತರಿಸುತ್ತದೆ.

    ನವರಾತ್ರಿ ಉಕ್ಕಿಸಿದ ನವಸಡಗರ  ಮನಸ್ಸಲ್ಲಿನ್ನೂ ಹಿತವಾಗಿ ಹರಡಿಕೊಂಡಿರುವಂತೆ, ಮುಸ್ಸಂಜೆಯ ಮುದ್ದಾದ ಮಳೆ, ಚೂರುಚೂರೇ ಆವರಿಸಿಕೊಳ್ಳುತ್ತಾ ಖುಷಿ ಕೊಡುವ ಚಳಿಯ ನಡುವೆ ಮತ್ತೊಂದು ಸಂಭ್ರಮ ಬಂದಿದೆ. ಅದು ಬೆಳಕಿನ,ಬದುಕಿನ ಹಕುಟುಂಬದ ಹಬ್ಬ, ಊರ ಹಬ್ಬವಾದ “ದೀಪಾವಳಿ”.

      ಪ್ರಕೃತಿಯಲ್ಲಿ ಹೊಸ ಹೂವು ಅರಳುವ ಸಮಯ. ಈ ಘಳಿಗೆ ಬದುಕು ಸಡಗರದ ಮತ್ತೊಂದು ಶಿಖರದೆಡೆಗೆ ಹೊರಳುತ್ತದೆ.

ಭಕ್ತಿ ಶಕ್ತಿ-ಪ್ರೇಮ-ಪ್ರಕೃತಿಯ ಹಬ್ಬ

    ದೀಪಾವಳಿ ಕೆಲವರಿಗೆ ಪಂಚ ದಿನಗಳ ಹಬ್ಬ. ಈ ಎಲ್ಲ ದಿನಗಳಲ್ಲಿ ಮೆರೆಯವುದು ಭಕ್ತಿ, ಶಕ್ತಿ ಪ್ರೀತಿ ಮತ್ತು ಪ್ರಕೃತಿ. ಇದು ಬದುಕಿಗೆ ಆಧಾರವಾದ ಜೀವ ಶಕ್ತಿಯ ವೈವಿಧ್ಯಮಯ ಸ್ವರೂಪಗಳ ಆರಾಧನೆ, ಕೃತಜ್ಞತೆ ಸಮರ್ಪಣೆಗೆ ವೇದಿಕೆ. ಸಂಬಂಧಗಳ ನಂಟನ್ನು ಮತ್ತಷ್ಟು ಗಾಢವಾಗಿಸುವ ಬೆಸುಗೆ. ದೀಪಾವಳಿ ಎಂದರೆ ಮನೆ-ಮನ ಎಲ್ಲವೂ ಒಮ್ಮೆ ಸ್ವಚ್ಛವಾಗಿ ಲಕಲಕಿಸುತ್ತದೆ. ಅಂತೆಯೇ ಹಳೆ ನೆನಪು, ನೋವುಗಳ ದು:ಖಗಳ ಕೊಳೆಯೂ ಗುಡಿಸಿ ಹೋಗುತ್ತದೆ. ಹೊಸ ಬಣ್ಣ, ಹೊಸ ಬೆಳಕು, ಹೊಸ ಬಟ್ಟೆಗಳ’ ಮಿಂಚು ಹಿತವಾಗುತ್ತದೆ. ದೇವ, ದೈವದೊಂದಿಗಿನ ಕುಟುಂಬ, ಪ್ರಕೃತಿಯೊಂದಿಗಿನ ಸಂಬಂಧ ಮತ್ತೆ ನವೀಕರಣಗೊಳ್ಳುತ್ತದೆ.

 ದುಷ್ಟ ಶಿಕ್ಷಣದ ಕಥಾನಕ

   ಶ್ರೀಕೃಷ್ಣ ನರಕಾಸುರನನ್ನು ಸಂಹಾರ ಮಾಡಿದ್ದು, ರಾವಣ ಸಂಹಾರದ ಬಳಿಕ ಶ್ರೀರಾಮ ಸೀತಾ ಸಮೇತನಾಗಿ ಮತ್ತೆ ಅಯೋಧ್ಯೆ ಪ್ರವೇಶಿಸಿದ್ದು, ಅಸಾಮಾನ್ಯ ಶೂರನಾದರೂ ಅತಿಯಾಸೆಗೆ ಬಲಿಯಾದ ಬಲಿ ಚಕ್ರವರ್ತಿಯನ್ನು ವಾಮನ ಮೂರ್ತಿ ಪಾತಾಳಕ್ಕೆ ತುಳಿದದ್ದು, ಸಮುದ್ರ ಮಥನ ಕಾಲದಲ್ಲಿ.

    ಲಕ್ಷ್ಮೀ ದೇವಿಯ ಜನನವಾಗಿದ್ದು, ಇಂದ್ರನ ಕ್ರೋಧ ರೂಪವಾದ ಮಳೆಯಿಂದ. ಗೋವುಗಳನ್ನು ರಕ್ಷಿಸಲು ಶ್ರೀಕೃಷ್ಣ ಗೋವರ್ಧನಗಿರಿಯನ್ನು ಎತ್ತಿ ಹಿಡಿದದ್ದು.. ಎಲ್ಲವೂ ದೀಪಾವಳಿಯ ಜತೆಗೆ ಬೆಸೆದುಕೊಂಡ ಪೌರಾಣಿಕ ಕಥನಗಳು. ಎಲ್ಲ ಕಥೆಗಳ ಆಳದಲ್ಲಿರುವುದು ದುಷ್ಟ ಶಿಕ್ಷಣ-ಶಿಷ್ಠ ರಕ್ಷಣ. ಅಸಹಾಯಕತೆಯ ಕ್ಷಣಗಳಲ್ಲಿ ಕೈಹಿಡಿವ ದೇವರ ದಯೆ.

    ಜಗತ್ತಿನ ಹಬ್ಬ: ಈ ಹಬ್ಬ ವಿವಿಧ ದೇಶದಲ್ಲಿ ಆಚರಿಸಲ್ಪಡುತ್ತದೆ. ಅಮೇರಿಕಾದ ವೈಟ್ ಹೌಸ್ ನಲ್ಲಿ ಕೂಡ ಈ ಹಬ್ಬ ನಡೆಯುತ್ತಿರುವುದು ಅತ್ಯಂತ ಹೆಮ್ಮೆಯ ವಿಚಾರವಾಗಿದೆ. ಈ ಬೆಳಕಿನ ಹಬ್ಬ ಜಗತ್ತಿನ ಹಬ್ಬವಾಗಿ ಬದಲಾಗುತ್ತಿರುವುದು ಸಂತೋಷದ ವಿಚಾರ. ಮನೆ ಮನದ ಹಬ್ಬ ಗಡಿ ದಾಟಿ ಮುನ್ನಡೆಯುತ್ತಿರುವುದು ಉತ್ತಮ ಬೆಳವಣಿಗೆ.

    ಮತ್ತೊಮ್ಮೆ ಹಳೆಯ ದಿನಗಳು ಮರುಕಳಿಸಲಿ. ಈ ಬೆಳಕು ದೂರ ದೂರ ಸಾಗಿ ಸಮಸ್ತ ಕತ್ತಲೆ ದೂರವಾಗಲಿ ಎಂಬ ಹಾರೈಕೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.