# Tags
#ಶಾಲಾ ಕಾಲೇಜು

 ಎಸ್.ಎಸ್. ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೊರಾರ್ಜಿ ಶಾಲೆಯ ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆ (CM siddaramayya congratulated Ankitha of Morarji school who won First in SSLC Examination)

ಎಸ್.ಎಸ್. ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೊರಾರ್ಜಿ ಶಾಲೆಯ ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆ

 ಮೈಸೂರು, ಮೇ 11 : ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರಳನ್ನು ಅಭಿನಂದಿಸಿದ ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramayya), ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ‍್ಯಾಂಕ್ ಪಡೆಯಬೇಕು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ಆಶಿಸಿದರು.

  ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದಾಗಿದೆ. 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ  ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನ ಪಡೆದಿದೆ. ಈ ಬಾರಿ ಐದರೊಳಗೆ ಬರಬೇಕು ಎಂದು ಸೂಚಿಸಿದ್ದೆ. ಏಳನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ಈ ಗುರಿ ಸಾಧಿಸುವಂತೆ ತಿಳಿಸಲಾಗುವುದು ಎಂದರು.

Leave a comment

Your email address will not be published. Required fields are marked *