• Home  
  • ಎಸ್‌ ಐ ಆರ್‌ ರದ್ದತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಯಿಂದ ಉಚ್ಚಿಲದಲ್ಲಿ ಪ್ರತಿಭಟನೆ (Social Democratic Party stages protest in Uchila, demanding the cancellation of SIR)
- protest

ಎಸ್‌ ಐ ಆರ್‌ ರದ್ದತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಯಿಂದ ಉಚ್ಚಿಲದಲ್ಲಿ ಪ್ರತಿಭಟನೆ (Social Democratic Party stages protest in Uchila, demanding the cancellation of SIR)

Share: ಎಸ್‌ ಐ ಆರ್‌ ರದ್ದತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಯಿಂದ ಉಚ್ಚಿಲದಲ್ಲಿ ಪ್ರತಿಭಟನೆ ಉಚ್ಚಿಲ ಪೇಟೆಯಲ್ಲಿ ನಡೆದ ಪ್ರತಿಭಟನಾ ಸಭೆ     (Uchila) ಉಚ್ಚಿಲ: ಎಸ್‌ ಐ ಆರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಚ್ಚಿಲ ಗ್ರಾಮ ಸಮಿತಿಯ ವತಿಯಿಂದ ಉಚ್ಚಿಲ ಪೇಟೆಯಲ್ಲಿ ಶುಕ್ರವಾರ ಸಂಜೆ  ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಯಿತು.   ಪ್ರತಿಭಟನೆಯಲ್ಲಿ ಭಾಗವಹಿಸಿದಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಯ […]

  (Uchila) ಉಚ್ಚಿಲ: ಎಸ್‌ ಐ ಆರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಚ್ಚಿಲ ಗ್ರಾಮ ಸಮಿತಿಯ ವತಿಯಿಂದ ಉಚ್ಚಿಲ ಪೇಟೆಯಲ್ಲಿ ಶುಕ್ರವಾರ ಸಂಜೆ  ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಯಿತು.

  ಪ್ರತಿಭಟನೆಯಲ್ಲಿ ಭಾಗವಹಿಸಿದಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿಯ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಮೂಳೂರು ರವರು, ಎಸ್‌ ಐ ಆರ್‌ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದರು.

  ಪ್ರತಿಭಟನೆಯಲ್ಲಿ ಎಸ್ಡಿಪಿಐ ಉಚ್ಚಿಲ ಗ್ರಾಮ ಸಮಿತಿ ಅಧ್ಯಕ್ಷ ಮಜೀದ್ ಉಚ್ಚಿಲ, ಉಡುಪಿ ಜಿಲ್ಲಾ ಕಾರ್ಯದರ್ಶಿ ರಝಾಕ್ ವೈಸ್, ಕಾಪು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಸಾದಿಕ್ ಕೆ. ಪಿ., ಉಪಾಧ್ಯಕ್ಷ ಇಬ್ರಾಹಿಂ ಹರ್ಶ್, ಇಬ್ರಾಹಿಂ ಕಂಚಿನಡ್ಕ ಜಿಲ್ಲಾ ಸಮಿತಿ ಸದಸ್ಯರು,ಕಾಪು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ತೌಫೀಕ್ ಉಚ್ಚಿಲ, ಕಾಪು ವಿಧಾನಸಭಾ ಕ್ಷೇತ್ರದ ಮಹಿಳಾ ಘಟಕದ ಉಪಾಧ್ಯಕ್ಷೆ ಫರ್ಜನಾ,  ಕಾರ್ಯದರ್ಶಿ ನಾಜ್ರಿನ ಕಾಪು, ಗ್ರಾಮ ಸಮಿತಿ ಉಪಾಧ್ಯಕ್ಷ ಶರೀಫ್ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು.

   ನೂರುದ್ದೀನ್ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.