• Home  
  • ಏಣಗುಡ್ಡೆ ಕುರ್ಕಾಲು ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ಅಯ್ಯಪ್ಪ ದೇಗುಲಕ್ಕೆ ಶಿಲಾನ್ಯಾಸ, ನಿಧಿಕುಂಭ (Foundation stone laying, Nidhikumbha for Ayyappa temple in Pampa Kshethra of Ynagudde Kurkalu Rishal Nagar)
- ಧಾರ್ಮಿಕ - ವಿಡಿಯೋ

ಏಣಗುಡ್ಡೆ ಕುರ್ಕಾಲು ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ಅಯ್ಯಪ್ಪ ದೇಗುಲಕ್ಕೆ ಶಿಲಾನ್ಯಾಸ, ನಿಧಿಕುಂಭ (Foundation stone laying, Nidhikumbha for Ayyappa temple in Pampa Kshethra of Ynagudde Kurkalu Rishal Nagar)

Share: ಏಣಗುಡ್ಡೆ ಕುರ್ಕಾಲು ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ಅಯ್ಯಪ್ಪ ದೇಗುಲಕ್ಕೆ ಶಿಲಾನ್ಯಾಸ, ನಿಧಿಕುಂಭ    (Katapadi) ಕಟಪಾಡಿ :ಏಣಗುಡ್ಡೆ ಕುರ್ಕಾಲು ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುವ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ನೆರವೇರಿತು. ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀ ಪಾದರು ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಕಾರ್ಯಕ್ರಮ ನೆರವೇರಿಸಿ ಆಶೀರ್ವಚನ ನೀಡಿದರು.   ಅನೇಕ ದೇವಸ್ಥಾನಗಳಿರುವ ಉಡುಪಿ, ದ.ಕ ಜಿಲ್ಲೆಯನ್ನು ದೇವರ ನಾಡೆಂದು […]

 (Katapadi) ಕಟಪಾಡಿ :ಏಣಗುಡ್ಡೆ ಕುರ್ಕಾಲು ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುವ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ನೆರವೇರಿತು.

ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀ ಪಾದರು ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಕಾರ್ಯಕ್ರಮ ನೆರವೇರಿಸಿ ಆಶೀರ್ವಚನ ನೀಡಿದರು.

  ಅನೇಕ ದೇವಸ್ಥಾನಗಳಿರುವ ಉಡುಪಿ, ದ.ಕ ಜಿಲ್ಲೆಯನ್ನು ದೇವರ ನಾಡೆಂದು ಹೇಳಬಹುದು. ಪಾಜಕ ಕ್ಷೇತ್ರ, ದುರ್ಗಾದೇವಿ ಸನ್ನಿಧಾನ, ಪರಶುರಾಮ ಸನ್ನಿಧಾನವನ್ನು ಸುತ್ತುವರಿಯುವ ಮೂಲಕ ಕಟಪಾಡಿ ಏಣಗುಡ್ಡೆಯ ಪಂಪಾ ಕ್ಷೇತ್ರದ ಅಯ್ಯಪ್ಪ ‌ಸನ್ನಿಧಾನವು ಪಾವಿತ್ರ್ಯ ತರುವ ಕಾರ್ಯವಾಗಿದೆ. ಹಿಂದು ಧರ್ಮದ ಉಳಿವಿನೊಂದಿಗೆ ಯುವಕರಲ್ಲಿ ಧಾರ್ಮಿಕ ಪ್ರಜ್ಞೆ ಮೂಡುವಲ್ಲಿ ಅಯ್ಯಪ್ಪ ವೃತವು ಕಾರಣವಾಗಿದೆ.

  ಕಟಪಾಡಿಯ ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ 40 ವರ್ಷಗಳ ನಂತರ ಸುಮಾರು 5 ಕೋಟಿ ವೆಚ್ಚದ ದೇವಳ ನಿರ್ಮಾಣದ ಕನಸು ಕಂಡಿದ್ದಾರೆ. ಅವರ ಕನಾಸು ನನಸಾಗಲಿ ಎಂದರು.

ಕಾಪು‌ ಶಾಸಕ ಗುರ್ಮೆ ಸುರೇಶ್ ‌ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕುದ್ರೋಳಿ‌ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಕಿಶೋರ್ ಆಳ್ವ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಮಾತನಾಡಿದರು.

 ಈ‌ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಚಂದ್ರಹಾಸ ಗುರುಸ್ವಾಮಿ ಮುಂಬೈ, ರಾಘು ಪೂಜಾರಿ ಕಲ್ಮಂಜೆ, ದಯಾನಂದ ವಿ ಬಂಗೇರ, ಪಲ್ಲಿ ಲಕ್ಮೀನಾರಾಯಣ ಹೆಗ್ಡೆ, ಶಶಿಧರ ವಾಗ್ಳೆ, ಶಶಿಧರ ಶೆಟ್ಟಿ ಮುಂಬೈ, ಯೋಧ ಸಚಿನ್ ಕರ್ಕೇರ, ರಾಧಾಕೃಷ್ಣ ಮೆಂಡನ್, ರಾಜೇಶ್ ಮಸ್ಕತ್, ಭುವನ್, ಗುರುಸ್ವಾಮಿ, ಸುರೇಶ್ ಜತ್ತನ್ ಕಟಪಾಡಿ, ಅಧ್ಯಕ್ಷರು ರಿಯಾನ್ ಟಿ ಕಟಪಾಡಿ, ಕಾರ್ಯಾಧ್ಯಕ್ಷ ಕೇಶವ ಕುಂದರ್ ಕೊಡವೂರು, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಜಿ. ಸನಿಲ್ ಅಚ್ಚಡ ಕಟಪಾಡಿ ಉಪಸ್ಥಿತರಿದ್ದರು.

ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಮಂಗಳೂರು ಇವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.

 ಸಚಿನ್ ಕರ್ಕೇರ ಪ್ರಾರ್ಥಿಸಿದರು. ಪತ್ರಕರ್ತ ಪ್ರಕಾಶ್ ಸುವರ್ಣ ಕಟಪಾಡಿ ಸ್ವಾಗತಿಸಿ, ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.