ಏ. 02 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಪ್ರಯುಕ್ತ ಚಪ್ಪರ ಮಹೂರ್ತ
ಪ್ರಕಟಣೆಯಲ್ಲಿ ತಿಳಿಸಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ ರಾಘವೇಂದ್ರ ನಾವಡ
(ಚಿತ್ರಕೃಪೆ: ರವಿ ಡಿಜಿಟಲ್ಸ್ ಪಡುಬಿದ್ರಿ)
(Padubiri) ಪಡುಬಿದ್ರಿ: ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಕಾರ್ಯಕ್ರಮವು 23.04.2026 ರಿಂದ 4-5- 2026 ಪರ್ಯಂತ ನಡೆಯಲಿದೆ.
ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಪ್ರಥಮ ಅಂಗವಾದ ಚಪ್ಪರ ಮಹೂರ್ತವು 02. 04. 2026ನೇ ಗುರುವಾರ ಬೆಳಿಗ್ಗೆ 9:30ಕ್ಕೆ ಸರಿಯಾಗಿ ಶ್ರೀ ಕ್ಷೇತ್ರದ ತಂತ್ರಿಗಳಾದ ಕೊಡವೂರು ಕಂಬಳಕಟ್ಟ ವೇದಮೂರ್ತಿ ರಾಧಾಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಸಂಪನ್ನಗೊಳ್ಳಲಿದೆ.
ಭಕ್ತಾಭಿಮಾನಿಗಳಾದ ತಾವೆಲ್ಲರೂ ಸಕಾಲದಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಭಗವಂತನ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕೆಂದು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ ರಾಘವೇಂದ್ರ ನಾವಡರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

