MLC ಐವನ್ ಡಿಸೋಜ ಮನೆ ಮೇಲಿನ ದಾಳಿ ಖಂಡನೀಯ: ಗುಲಾಂ ಮೊಹಮ್ಮದ್
ಪಡುಬಿದ್ರಿ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜರ ಮಂಗಳೂರಿನ ಮನೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ. ಇದೊಂದು ಮೃಗೀಯ ವರ್ತನೆಯಾಗಿದ್ದು, ಈ ಕೃತ್ಯವನ್ನು ಖಂಡಿಸುವುದಾಗಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೇಳಿದ್ದಾರೆ.
ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಅದನ್ನೇ ತಪ್ಪು ಎಂದು ಬಿಂಬಿಸಿ ಅವರ ಮನೆಯ ಮೇಲೆ ದಾಳಿ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ.
ಈ ಕೃತ್ಯದ ಹಿಂದಿರುವ ಎಲ್ಲಾ ಪುಢಾರಿಗಳನ್ನು ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗುಲಾಂ ಮೊಹಮ್ಮದ್ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

