ಕಟಪಾಡಿ ಎಸ್ ವಿಎಸ್ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ
ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಧರ್ಮಸ್ಥಳ ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ
(Katapadi) ಕಟಪಾಡಿ: ಕಟಪಾಡಿ ಎಸ್ ವಿಎಸ್ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ನೆರವೇರಿತು.
ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಉದ್ಘಾಟಿಸಿ, ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶುಭ ಹಾರೈಸಿದರು.
ಕಾಪು ಪೊಲೀಸ್ ನೀರಿಕ್ಷ ತೇಜಸ್ವಿಯವರು ತಂಬಾಕು ಸೇವನೆಯಿಂದ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ವಿದ್ಯಾರ್ಥಿಗಳಿಗೆ ಪೋಷಕರಿಗೆ ದುಷ್ಟಟ ವಿರುದ್ಧ ಜಾಗೃತಿ ಮೂಡಿಸುವ ಮಾಹಿತಿ ಜೊತೆಗೆ ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅಂಕಿ ಅಂಶ ಗಳ ಬಗ್ಗೆ ಮಾಹಿತಿ ನೀಡಿದರು.
ಕಾಪು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯೇಂದ್ರ ಪೈ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತ ಶೆಟ್ಟಿ, ಶಾಲಾ ಆಡಳಿತಾಧಿಕಾರಿ ದೇವೇಂದ್ರ, ಶಿಕ್ಷಕರ ವೃಂದ, ಮೇಲ್ವಿಚಾರಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

