ಕಟಪಾಡಿ ಮಟ್ಟು: 23 ಪ್ರಬೇಧಗಳ 219 ಹಕ್ಕಿಗಳ ವೀಕ್ಷಣೆ
ಉಡುಪಿಗೆ ಬನ್ನಿ ತಂಡದ ನೇತೃತ್ವದಲ್ಲಿ ಪಿತ್ರೋಡಿ, ಮಟ್ಟು ಪರಿಸರದಲ್ಲಿ ಹಕ್ಕಿ ವೀಕ್ಷಣೆ
(Katpadi) ಕಟಪಾಡಿ : ಉಡುಪಿಗೆ ಬನ್ನಿ ತಂಡದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಪಿತ್ರೋಡಿ ಹಾಗೂ ಮಟ್ಟು ಪರಿಸರದಲ್ಲಿ ಶನಿವಾರ ಸಂಜೆ ಹಕ್ಕಿ ವೀಕ್ಷಣೆ ಕಾರ್ಯಕ್ರಮ ನಡೆಯಿತು.
ಸುಮಾರು ಒಂದೂವರೆ ಗಂಟೆಗಳ ಕಾಲ ಪರಿಸರಾಸಕ್ತರು ಕಾಲ್ನಡಿಗೆಯ ಮೂಲಕ ಸುತ್ತಮುತ್ತಲಿನ ಪರಿಸರದಲ್ಲಿ 23 ಪ್ರಬೇಧಗಳ 219 ಹಕ್ಕಿಗಳನ್ನು ಪಟ್ಟಿ ಮಾಡಿದರು.
ಇದರಲ್ಲಿ ಬ್ಲಾಕ್ ಹೆಡೆಡ್ ಐಬಿಸ್, ಗುಲಾಬಿ ಕೊರಳಿನ ಗಿಳಿ, ಸಣ್ಣ ಕುಟ್ರ, ಕಾಡು ಗೊರವಂಕ, ಚುಕ್ಕೆ ಬೆಳವ, ಗದ್ದೆ ಮಿಂಚುಳ್ಳಿ, ನೀಲಿ ಮಿಂಚುಳ್ಳಿ, ಕೆಂಪು ಟಿಟ್ಟಿಭ, ದೊಡ್ಡ ಬೆಳ್ಳಕ್ಕಿ, ಕೊಳದ ಬಕ, ಸಣ್ಣ ಕಳ್ಳಿಪೀರ, ಗದ್ದೆಗೊರವ, ಗಲ್ ಸೇರಿದಂತೆ 23 ಪ್ರಬೇಧಗಳು ಒಳಗೊಂಡಿವೆ.
ಬಳಿಕ ಮಟ್ಟು ಗುಳ್ಳ ಬೆಳೆಗಾರರ ಜತೆ ಸಂವಾದ ನಡೆಯಿತು.
ಮಟ್ಟು ಗುಳ್ಳ ಬೆಳೆಗಾರರ ಸಂಘದ ಪ್ರಬಂಧಕ ಮಟ್ಟು ಲಕ್ಷ್ಮಣ್, ಗಿರೀಶ್ ಆಚಾರ್, ಪ್ರತಿಮಾ ಆಚಾರ್, ಮೇಧಾ ನಾಯಕ್, ರಮ್ಯಾ ಕಾಮತ್, ರಾಜಶ್ರೀ ಎಸ್, ವೈಭವ್ ಯಡಿಯಾಳ್, ವಿದ್ಯಾಶ್ರೀ ಎಸ್, ಪ್ರಸನ್ನ ಉದ್ಯಾವರ ಉಪಸ್ಥಿತರಿದ್ದರು.
ಡಾ. ಗಣೇಶ್ ಪ್ರಸಾದ್ ಜಿ. ನಾಯಕ್ ಸ್ವಾಗತಿಸಿ ಕಾರ್ಯಕ್ರಮ ಸಂಯೋಜಿಸಿದರು.

