ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ
(Katapadi) ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ಶಂಕರಪುರದಲ್ಲಿ ನೆರವೇರಿತು.
ಕಾರ್ಯಕ್ರಮವನ್ನು ಸಾಯಿ ಮುಖ್ಯಪ್ರಾಣ ದೇವಸ್ಥಾನದ ಗುರೂಜಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಶ್ರೀ ಸಾಯಿ ಈಶ್ವರ್ ಗುರೂಜಿ, ಪ್ರಾಣಿ ಪಕ್ಷಿಗಳಿಗೂ ಆತ್ಮವಿದೆ. ಪ್ರಾಣಿ ಪಕ್ಷಿಗಳು ವಿವಿಧ ಕಾರಣದಿಂದ ಸಾವನ್ನಪ್ಪಿದಾಗ ಇದಕ್ಕೆ ಮೋಕ್ಷ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ ಕಾರ್ಯಕ್ರಮವು ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮಠದ ಟ್ರಸ್ಟಿಗಳಾದ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಸಮಾಜ ಸೇವಕ ಪ್ರಶಾಂತ್ ಪೂಜಾರಿ, ವಿನೋದ್ ಪಡೀಲ್, ಚಂದ್ರಹಾಸ್, ಸಂತೋಷ್ ಉದ್ಯಾವರ ಮುಂತಾದವು ಉಪಸ್ಥಿತರಿದ್ದರು.
ಮಠದ ಪ್ರಮುಖರಾದ ಸತೀಶ್, ನಿಲೇಶ್ ಮುಂತಾದವರು ಸಹಕರಿಸಿದರು. ರಾಘವೇಂದ್ರ ಪ್ರಭು ನಿರೂಪಿಸಿ, ವಂದಿಸಿದರು.
