ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ (Bollywood actress Shilpa Shetty visits Kateelu Sri Durgaparameshwari temple)

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ
(Kateelu) ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಶುಕ್ರವಾರ ಪಡುಬಿದ್ರಿಯಲ್ಲಿ ಶಿಲ್ಪ ಶೆಟ್ಟಿ ಕುಂದ್ರರವರ ಹರಕೆಯ ಡಕ್ಕೆ ಬಲಿ ಸೇವೆ ಇರುವುದರಿಂದ ಗುರುವಾರ ಕಟೀಲು ದೇವಳಕ್ಕೆ ಭೇಟಿ ನೀಡಿದ್ದಾರೆ.
ಈ ಸಂದರ್ಭ ಕಟೀಲು ದೇವಳದ ಪ್ರಧಾನ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ರವಿ ಕೋಟ್ಯಾನ್ ಶಿಬರೂರು ಮತ್ತಿತರರು ಇದ್ದರು.