• Home  
  • ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪದವೀಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ (Congratulatory program at Shri Durga Parameshwari PU College Kateelu)
- ಶಾಲಾ ಕಾಲೇಜು

ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪದವೀಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ (Congratulatory program at Shri Durga Parameshwari PU College Kateelu)

Share: ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪದವೀಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ  ಕಲಿತ ಶಾಲೆಯನ್ನು ಮರೆಯದಿರಿ – ವಾಸುದೇವ ಕಾಮತ್ (Kateelu) ಕಟೀಲು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಸಾಧನೆಗಳನ್ನು ಮಾಡುತ್ತ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಕೊಳ್ಳೋಣ ಎಂದು ಮಂಗಳೂರು ಕೆನರಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಡಿ. ವಾಸುದೇವ ಕಾಮತ್ ಹೇಳಿದರು. ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ  ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟಶ್ರೇಣಿಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲಿತ ಶಾಲೆಯನ್ನು ಮರೆಯದೆ […]

ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪದವೀಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ

 ಕಲಿತ ಶಾಲೆಯನ್ನು ಮರೆಯದಿರಿ – ವಾಸುದೇವ ಕಾಮತ್

(Kateelu) ಕಟೀಲು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಸಾಧನೆಗಳನ್ನು ಮಾಡುತ್ತ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಕೊಳ್ಳೋಣ ಎಂದು ಮಂಗಳೂರು ಕೆನರಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಡಿ. ವಾಸುದೇವ ಕಾಮತ್ ಹೇಳಿದರು.

ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ  ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟಶ್ರೇಣಿಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲಿತ ಶಾಲೆಯನ್ನು ಮರೆಯದೆ ಒಳ್ಳೆಯ ವಿಚಾರಗಳನ್ನು ಕಲಿಯುತ್ತ, ಸಾಹಿತ್ಯ ಸಾಂಸ್ಕೃತಿಕ ಧಾರ್ಮಿಕ ಚಿಂತನೆಗಳೊಂದಿಗೆ ಕ್ರಿಯಾಶೀಲವಾಗಿ ಬೆಳೆಯಬೇಕೆಂದು ಅವರು ಹೇಳಿದರು.

ಪಿಯುಸಿಯಲ್ಲಿ ವಿಶಿಷ್ಟಶ್ರೇಣಿಯಲ್ಲಿ ಉತ್ತೀರ್ಣರಾದ 115 ವಿದ್ಯಾರ್ಥಿಗಳನ್ನು, ರೆಡ್ ಕ್ರಾಸ್ ನಲ್ಲಿ ಉನ್ನತ ಶ್ರೇಣಿ  ಪಡೆದವರು ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಹನ್ನೆರಡು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಇದೇ ಸಂದರ್ಭ ಪಠ್ಯಪೂರಕ ವಿವಿಧ ಸಂಘಗಳ ಚಟುವಟಿಕೆಗಳನ್ನು ಉದ್ಘಾಟಿಸಿದ ಜನಪದ ವಿದ್ವಾಂಸ ಗಣೇಶ ಅಮೀನ್ ಸಂಕಮಾರ್ ಮಾತನಾಡಿ, ಕಟೀಲಿನಂತಹ ವಿಶಿಷ್ಟ ಸ್ಥಳದಲ್ಲಿ ಕಲಿಯುವ ಅವಕಾಶ ಸಿಕ್ಕಿರುವುದನ್ನು ಸದುಪಯೋಗಪಡಿಸಿಕೊಳ್ಳಿ. ಒಳ್ಳೆಯದನ್ನು ಸ್ವೀಕರಿಸಿ ಕೆಟ್ಟದ್ದನ್ನು ಬಿಡೋಣ. ಜೀವನೋತ್ಸಾಹ ಸದಾ ನಮ್ಮ ಜೊತೆಗಿರಲಿ ಎಂದರು.

ದೇಗುಲದ ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕಯ್ಯ ಸಾಲ್ಯಾನ್, ವಿದ್ಯಾರ್ಥಿ ನಾಯಕ ಪ್ರಥಮ್ ವೇದಿಕೆಯಲ್ಲಿದ್ದರು.

ಉಪನ್ಯಾಸಕರಾದ ವಾದಿರಾಜ್  ರಾವ್, ಕವಿತಾ, ಕೇಶವ ಎಚ್. ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು.

ವೈಷ್ಣವಿ ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಕುಸುಮಾವತಿ ಸ್ವಾಗತಿಸಿದರು.

ಪುಂಡಲೀಕ ಕೊಠಾರಿ ವಂದಿಸಿದರು. ಶೈಲಜಾ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.