ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಅಪಘಾತಕ್ಕೊಳಗಾಗಿ ಮೃತ್ತ ಪಟ್ಟ ಘಟನೆ ಗುರುವಾರ ಕಡಬದಲ್ಲಿ ನಡೆದಿದೆ.
ಕಡಬ ಮೆಸ್ಕಾಂ ಲೈನ್ ಮ್ಯಾನ್ ಬಾಗಲಕೋಟೆ ಮೂಲದ ದ್ಯಾಮಣ್ಣ ಮೃತ ಪಟ್ಟವರು.
ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆ ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಯಿತು.
ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಮೃಪಟ್ಟಿದ್ದಾರೆ.
