ವಿಜಯನಗರ; ಕಣ್ಣು ಕಾಣದ 58 ವರ್ಷದ ವೃದ್ಧೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ವೆಸಗಿದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಪುರ ತಾಂಡದಲ್ಲಿ ನಡೆದಿದೆ.
ಲೋಕೇಶ ನಾಯ್ಕ್ ಎಂಬಾತನೇ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿದ ದುಷ್ಕರ್ಮಿ.
ಕಣ್ಣು ಕಾಣ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಆರೋಪಿ ಲೋಕೇಶ ನಾಯ್ಕ್ ಪರಾರಿಯಾಗಿದ್ದ.
ಕಾಮುಕನ ಕೃತ್ಯಕ್ಕೆ ಮನನೊಂದು ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಲೋಕೇಶ್ ಗೆ ಮದುವೆಯಾಗಿ ಮಕ್ಕಳಿದ್ದಾರೆ. ಹಗರಿ ಬೊಮ್ಮನಹಳ್ಳಿ ತಾಲೂಕಿನ ವ್ಯಾಸಾಪುರ ತಾಂಡದ ಲೋಕೇಶ ನಾಯ್ಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಇದೀಗ ಗ್ರಾಮಸ್ಥರು ಕಾಮುಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಿದ್ದಾರೆ.

