• Home  
  • ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ. (Veteran Kannada film director Joe Simon passes away due to heart attack)
- ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ. (Veteran Kannada film director Joe Simon passes away due to heart attack)

Share: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ (Bengaluru) ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಫಿಲಂ ಚೇಂಬರಿನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.   ಸಭೆಯಲ್ಲಿದ್ದಾಗಲೇ ಅವರಿಗೆ ಎದೆ ನೋವು ಕಂಡು ಬಂತು. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.ಆದರೂ ಅವರು ಬದುಕುಳಿಯಲಿಲ್ಲ.    ಜೋ ಸೈಮನ್ ಅವರು ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಿರ್ದೇಶಕ, ನಟ, ಗೀತ ರಚನೆಕಾರನಾಗಿ […]

(Bengaluru) ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಫಿಲಂ ಚೇಂಬರಿನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

  ಸಭೆಯಲ್ಲಿದ್ದಾಗಲೇ ಅವರಿಗೆ ಎದೆ ನೋವು ಕಂಡು ಬಂತು. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.ಆದರೂ ಅವರು ಬದುಕುಳಿಯಲಿಲ್ಲ.

   ಜೋ ಸೈಮನ್ ಅವರು ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಿರ್ದೇಶಕ, ನಟ, ಗೀತ ರಚನೆಕಾರನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

  1977 ರಲ್ಲಿ ಸಿನಿಮಾ ನಿರ್ದೇಶನ ಆರಂಭಿಸಿದ ಜೋ ಸೈಮನ್ ಮೊದಲು ನಿರ್ದೇಶಿಸಿದ್ದು ‘ಒಂದು ಪ್ರೇಮದ ಕತೆ, ಕನ್ನಡಕ್ಕೆ ಹಲವಾರು ಆಕ್ಷನ್ ಮತ್ತು ಪ್ರೇಮಕತಾ ಸಿನಿಮಾಗಳನ್ನು ಜೋ ಸೈಮನ್ ನೀಡಿದ್ದಾರೆ.

   ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರೊಟ್ಟಿಗೆ ಆಪ್ತ ಗೆಳೆತನ ಹೊಂದಿದ್ದ ಜೋ ಸೈಮನ್, ‘ಸಿಂಹ ಜೋಡಿ’, ‘ಸಾಹಸ ಸಿಂಹ, ‘ಹಾಂಕಾಂಗ್ನಲ್ಲಿ ಏಜೆಂಟ್ ಅಮರ್’, ‘ಸ್ನೇಹದ ಕಡಲಲ್ಲಿ, ‘ರವಿವರ್ಮ, ‘ಟೈಂ ಬಾಂಬ್’ ಇನ್ನೂ ಹಲವಾರು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.