ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು
ಉಡುಪಿ: ಕನ್ನಡ ಭಾಷೆಯ ಬಗೆಗಿನ ಒಲವು ಸಾಹಿತ್ಯ ಸಂಸ್ಕೃತಿಯ ಅಭಿಮಾನ ಎಲ್ಲರಲ್ಲೂ ಮೂಡಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ, ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡವೂರು ತಿಳಿಸಿದರು.
ಅವರು ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮಾಸದ ಸಂಭ್ರಮಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ಎಸ್ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ಅವರು, ಕನ್ನಡ ಭಾಷೆ, ನಾಡು , ನುಡಿಯ ಬಗ್ಗೆ ಚಿಂತನೆ ನಡೆಸಿದರು.
ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕವನ ಹಾಗೂ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಸಂಯೋಜಕಿ ಕನ್ನಡ ವಿಭಾಗದ ಕುಮಾರಿ ದೀಪಿಕಾ ಉಪಸ್ಥಿತರಿದ್ದರು.
ಭೂಮಿಕ ಸ್ವಾಗತಿಸಿದರು. ಶ್ರೀಕರ ಕಾರ್ಯಕ್ರಮ ನಿರೂಪಿಸಿದರು. ದಿಶಾ ರಾವ್ ಅತಿಥಿಗಳನ್ನು ಪರಿಚಯಿಸಿದರು. ಮಾಧುರ್ಯ ವಂದನಾರ್ಪಣೆಗೈದರು.

