• Home  
  • ಕನ್ನಡ ಸಿನಿಮಾ ರಂಗದ ಖ್ಯಾತನಟಿ ಲೀಲಾವತಿ ನಿಧನ (Famous Kannada Cinema Actress Smt Leelavathi no more)
- ಪ್ರಚಲಿತ

ಕನ್ನಡ ಸಿನಿಮಾ ರಂಗದ ಖ್ಯಾತನಟಿ ಲೀಲಾವತಿ ನಿಧನ (Famous Kannada Cinema Actress Smt Leelavathi no more)

Share:  ಕನ್ನಡ ಸಿನಿಮಾ ರಂಗದ ಖ್ಯಾತನಟಿ ಲೀಲಾವತಿ ನಿಧನ ಬೆಂಗಳೂರು: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಲೀಲಾವತಿ ಇಂದು ಸಂಜೆ ನಿಧನರಾದರು.  ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 1938ರಲ್ಲಿ ಜನಿಸಿದ ಲೀಲಾವತಿ ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಒಲವು ಆಸಕ್ತಿ ಹೊಂದಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ […]

 ಕನ್ನಡ ಸಿನಿಮಾ ರಂಗದ ಖ್ಯಾತನಟಿ ಲೀಲಾವತಿ ನಿಧನ

ಬೆಂಗಳೂರು: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಲೀಲಾವತಿ ಇಂದು ಸಂಜೆ ನಿಧನರಾದರು.

 ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 1938ರಲ್ಲಿ ಜನಿಸಿದ ಲೀಲಾವತಿ ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಒಲವು ಆಸಕ್ತಿ ಹೊಂದಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.

 ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು.

ಮದುವೆ ಮಾಡಿ ನೋಡು, ಸಂತ ತುಕಾರಾಂ, ತುಂಬಿದ ಕೊಡ, ಕಣ್ತೆರೆದು ನೋಡು, ರಾಣಿ ಹೊನ್ನಮ್ಮ, ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ, ಬಿಳಿ ಹೆಂಡ್ತಿ, ನಾ ನಿನ್ನ ಮರೆಯಲಾರೆ, ಕಳ್ಳ ಕುಳ್ಳ, ಡಾಕ್ಟರ್ ಕೃಷ್ಣ, ಕನ್ನಡದ ಕಂದ, ವೀರ ಕೇಸರಿ ಲೀಲಾವತಿ ನಟಿಸಿದ ಪ್ರಮುಖ ಚಿತ್ರಗಳು.

 ಲೀಲಾವತಿ ಚಿತ್ರರಂಗದ  ಹಾಗೂ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

ನಟ ದರ್ಶನ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಆಗಮಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು.

ಲೀಲಾವತಿ ಅವರು ನಟ ವಿನೋದ್‌ ರಾಜ್‌ ಅವರನ್ನು ಅಗಲಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.