ಕರ್ಣಾಟಕ ಬ್ಯಾಂಕ್ ಮಾಜಿ ಸಿಇಒ ಜಯರಾಮ್ ಭಟ್ ವಿಧಿವಶ
ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ಇಂದು ನಿಧನರಾದರು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕು ಪೊಳಲಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಮಂಗಳೂರಿನಲ್ಲಿ ಪದವಿವರೆಗಿನ ಶಿಕ್ಷಣ ಪೂರೈಸಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದರು.
ಮೂಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಪ್ರಾರಂಭಿಸಿದ್ದ ಅವರು, 1973ರಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕರ್ಣಾಟಕ ಬ್ಯಾಂಕ್ ಸೇರಿದರು.
1976ರಲ್ಲಿ ಶಾಖಾ ವ್ಯವಸ್ಥಾಪಕರಾಗಿ ವಿವಿಧ ಶಾಖೆಗಳಲ್ಲಿ ಕಾರ್ಯ ನಿರ್ವಹಿಸಿ, ನಂತರ ಸಹಾಯಕ ಪ್ರಧಾನ ವ್ಯವಸ್ಥಾಪಕರಾಗಿ, ಉಪ ಪ್ರಧಾನ ವ್ಯವಸ್ಥಾಪಕರಾಗಿ, 2005ರಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡರು.

