ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ
(Kaup) ಕಾಪು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದರವರು ಶನಿವಾರ ಸಪತ್ನಿಕರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ವಕೀಲರಾದ ಎಂ ಸುಧಾಕರ್ ಪೈ, ಕೇತನ್ ಬಂಗೇರ, ಅಭಿಷೇಕ್ ಮಾರ್ಲ, ಶ್ರೀನಿಧಿ ಹೆಗ್ಡೆಯವರೊಂದಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರು ಅಮ್ಮನ ಅನುಗ್ರಹ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯಾನಿರ್ವಹಣಾಧಿಕಾರಿ ರವಿಕಿರಣ್, ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಮನೋಹರ್ ರಾವ್ ಕಲ್ಯಾ, ಚರಿತ ದೇವಾಡಿಗ, ಲಕ್ಷ್ಮೀಶ ತಂತ್ರಿ, ರವಿ ಭಟ್ ಮಂದಾರ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

