• Home  
  • ಕಲಾಯಿ ಅಶ್ರಫ್ ಕೊಲೆ ಆರೋಪಿ ಭರತ್ ಕುಮ್ಡೇಲು ಕೋರ್ಟಿಗೆ ಶರಣು (Kalai Ashraf murder accused Bharat Kumdelu surrenders before court)
- ಅಪರಾಧ

ಕಲಾಯಿ ಅಶ್ರಫ್ ಕೊಲೆ ಆರೋಪಿ ಭರತ್ ಕುಮ್ಡೇಲು ಕೋರ್ಟಿಗೆ ಶರಣು (Kalai Ashraf murder accused Bharat Kumdelu surrenders before court)

Share: ಕಲಾಯಿ ಅಶ್ರಫ್ ಕೊಲೆ ಆರೋಪಿ ಭರತ್ ಕುಮ್ಡೇಲು ಕೋರ್ಟಿಗೆ ಶರಣು ಮಾನ್ಯ ನ್ಯಾಯಾಲಯವು ಈತನಿಗೆ ಅ. 25 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.  (Bantwala) ಬಂಟ್ವಾಳ : ಇಲ್ಲಿಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017 ರಲ್ಲಿ ನಡೆದ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್‌ ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಖುದ್ದು ಶರಣಾಗಿದ್ದಾನೆ.     ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಿಕೊಂಡಿದ್ದ […]

 (Bantwala) ಬಂಟ್ವಾಳ : ಇಲ್ಲಿಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017 ರಲ್ಲಿ ನಡೆದ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್‌ ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಖುದ್ದು ಶರಣಾಗಿದ್ದಾನೆ.

    ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಿಕೊಂಡಿದ್ದ ಭರತ್ ಕುಮ್ಡೇಲ್ ಕಳೆದ ಮೂರ್ನಾಲ್ಕು ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲದಿಂದ ವಾರಂಟ್ ಕೂಡ ಜಾರಿಯಾಗಿತ್ತು.

    ಶುಕ್ರವಾರ ತನ್ನ ವಕೀಲರ ಮೂಲಕ ಮಂಗಳೂರಿನ
ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸ್ವಯಂ ಪ್ರೇರೀತವಾಗಿ ಶರಣಾಗಿದ್ದು, ನ್ಯಾಯಾಲಯವು ಈತನಿಗೆ ಅ. 25 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

     ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲಿನಲ್ಲಿ ನಡೆದ ಅಬ್ದುಲ್ ರಹೀಂ ಕೊಲೆ ಪ್ರಕರಣದಲ್ಲೂ ಪ್ರಮುಖ ಆರೋಪಿಯನ್ನಾಗಿ ಪೊಲೀಸರು ಗುರುತಿಸಿದ್ದು, ಈ ಕೃತ್ಯ ನಡೆದ ದಿನದಿಂದಲೂ ಇದುವರೆಗೂ  ಭರತ್ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ನ್ಯಾಯಾಲಯದ ವಾರಂಟ್ ಪಡೆದು ಮನೆಗೂ ದಾಳಿ ನಡೆಸಿದ್ದರೂ, ಪೊಲೀಸರಿಗೆ ಸುಳಿವು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

   ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣವಾದ ಆರೋಪದಲ್ಲಿ  ಭರತ್ ಕುಮ್ಡೇಲು ವಿರುದ್ದ ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ, ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಕೆಲ ದಿನಗಳ ಹಿಂದೆಯಷ್ಟೇ ಸಂಘಟಿತ ಅಪರಾಧ ತಡೆ ಕಾಯ್ದೆ (ಕೋಕಾ)ಯಡಿಯಲ್ಲಿಯೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

    ಕೊಳತ್ತಮಜಲು‌ ರಹೀಂ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟ ಹಿನ್ನಲೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮುಂದಿನ ವಾರ ನ್ಯಾಯಾಲಯದಿಂದ ಬಾಡಿ ವಾರಂಟ್ ಪಡೆದು ಭರತ್ ನನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.