ಕಲ್ಲಡ್ಕದಲ್ಲಿ ಬಸ್ ಬೈಕ್ ಗೆ ಡಿಕ್ಕಿ: ಯುವಕ ಸಾವು
ಬಂಟ್ವಾಳ: ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿಯಾಗಿ ಯುವಕ ಧಾರುಣವಾಗಿ ಮೃತ ಪಟ್ಟ ಘಟನೆ ಕಲ್ಲಡ್ಕದಲ್ಲಿ ಸಂಭವಿಸಿದೆ.
ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್(28) ಮೃತಪಟ್ಟ ಯುವಕ.
ಲತೀಶ್ ಮಂಗಳೂರಿನಲ್ಲಿ ಮ್ಯಾಕನಿಕ್ ಆಗಿ ಕೆಲಸ ಮಾಡುತ್ತಿದ್ದ.ನಿನ್ನೆ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕದಲ್ಲಿ ಅಪಘಾತ ನಡೆದಿದೆ.
ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಸೆಲಿನಾ ಖಾಸಗಿ ಬಸ್ಸು ಬೈಕ್ ಗೆ ಡಿಕ್ಕಿ ಯಾಗಿದೆ. ಡಿಕ್ಕಿಯ ರಭಸಕ್ಕೆ ಲತೀಶ್ ಗಂಭೀರವಾಗಿ ಗಾಯಗೊಂಡಿದ್ದರು.
ತೀವ್ರಗಾಯಗೊಂಡ ಅವರನ್ನುಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಸಂಜೆ ಮೃತಪಟ್ಟಿದ್ದಾರೆ.
ಅಪಘಾತದ ಸ್ಥಳಕ್ಕೆ ಬಂಟ್ವಾಳ ಫೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

