• Home  
  • ಕಲ್ಲಡ್ಕ : ಆ.  24 ರಂದು ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ (Kalladka: Dharma protection conference to be held at Dharmasthala on August 24)
- ಧಾರ್ಮಿಕ

ಕಲ್ಲಡ್ಕ : ಆ.  24 ರಂದು ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ (Kalladka: Dharma protection conference to be held at Dharmasthala on August 24)

Share: ಕಲ್ಲಡ್ಕ : ಆ.  24 ರಂದು ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣಾ ಸಮಾವೇಶ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಆಯೋಜನೆ (Bantwala) ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆಯು ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ನಡೆಯಿತು.  ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕರವರು ಮಾತನಾಡಿ, ಆಗಸ್ಟ್  24 ರಂದು ಧರ್ಮಸ್ಥಳದಲ್ಲಿ ನಡೆಯಲಿರುವ ಧರ್ಮ […]

(Bantwala) ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆಯು ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ನಡೆಯಿತು.

 ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕರವರು ಮಾತನಾಡಿ, ಆಗಸ್ಟ್  24 ರಂದು ಧರ್ಮಸ್ಥಳದಲ್ಲಿ ನಡೆಯಲಿರುವ ಧರ್ಮ ಸಂರಕ್ಷಣಾ ಸಮಾವೇಶದ ಬಗ್ಗೆ  ಮಾಹಿತಿಯನ್ನು ನೀಡಿದರಲ್ಲದೆ, ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದ ಭಕ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಕೋರಿ, ಶೌರ್ಯ ತಂಡದ ಜವಾಬ್ದಾರಿಗಳ ಬಗ್ಗೆಯು ಮಾಹಿತಿ ನೀಡಿದರು.

 ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್, ವಿಟ್ಲ ತಾಲೂಕು ಭಜನಾ ಪರಿಷತ್ ಕೋಶಾಧಿಕಾರಿ ಜಯರಾಮ್ ರೈ, ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ  ಬೋಳಂತೂರು ಒಕ್ಕೂಟ ಅಧ್ಯಕ್ಷೆ ಸೀತಾ, ಶೌರ್ಯ ತಂಡದ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ಸಂಯೋಜಕಿ ವಿದ್ಯಾ, ಶೌರ್ಯ ಸದಸ್ಯರುಗಳಾದ ಗಣೇಶ್ ನೆಟ್ಲ, ರವಿಚಂದ್ರ, ಧನಂಜಯ, ರಮೇಶ್ ಕುದ್ರೆಬೆಟ್ಟು, ಸಂತೋಷ್ ಬೊಲ್ಪೊಡಿ, ಚಿನ್ನಾ ಕಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

 ವಿದ್ಯಾ ಸ್ವಾಗತಿಸಿದರು. ಗಣೇಶ್ ವಂದಿಸಿದರು. 

Leave a comment

Your email address will not be published. Required fields are marked *

eMedia Kannada  @2025. All Rights Reserved.