ಕವಾಡಿಗರಹಟ್ಟಿ ಪ್ರಕರಣ: ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಬಿಡುಗಡೆ
ಕವಾಡಿಗರಹಟ್ಟಿ ಪ್ರಕರಣ: ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಬಿಡುಗಡೆ
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ.
ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ನೀಡಿದ ಸೂಚನೆಯ ಮೇರೆಗೆ ದುರಂತದಲ್ಲಿ ಮೃತರಾದ ಮಂಜುಳಾ, ರಘು ಹಾಗೂ ಪ್ರವೀಣ್ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳಂತೆ ಪರಿಹಾರ ಮಂಜೂರು ಮಾಡಿ, ಜಿಲ್ಲಾಧಿಕಾರಿಗಳಿಗೆ ಒಟ್ಟು 15 ಲಕ್ಷ ರೂ ಬಿಡುಗಡೆ ಮಾಡಲಾಗಿದೆ.
ಜುಲೈ 31 ರಂದು ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಎಸ್ಸಿ ಕಾಲೋನಿಯಲ್ಲಿ ಕುಡಿಯುವ ನೀರು ಕಲುಷಿತ ಹೊಂದಿದ್ದರಿಂದ ಅಲ್ಲಿನ ನಿವಾಸಿಗಳು ಅಸ್ವಸ್ಥಗೊಂಡು ಮೂವರು ಮೃತಪಟ್ಟಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಹಾಗೂ ಜಿಲ್ಲಾಧಿಕಾರಿಗಳು ಸಲ್ಲಿಸಿದ ವರದಿಯನ್ನು ಆಧರಿಸಿ ಪರಿಹಾರ ಬಿಡುಗಡೆ ಮಾಡಲಾಗಿದೆ.