• Home  
  • ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳ ಘೋಷಣೆ
- ದೇಶ-ವಿದೇಶ - ರಾಜಕೀಯ - ವ್ಯವಹಾರ

ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳ ಘೋಷಣೆ

Share: ಬೆಂಗಳೂರು : ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳ ಕುರಿತ ಸಂಪುಟ ತೀರ್ಮಾನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಇಂದು ಮಾಹಿತಿ ನೀಡಿದರು. ಜನ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ನಾವು ಬಸವಣ್ಣನ ನಾಡಿನವರು. ಕೊಟ್ಟ ಮಾತಿಗೆ ಬದ್ಧ.5 ಗ್ಯಾರಂಟಿಗಳನ್ನು ನೀಡುವ ಸಂಬಂಧ ತೀರ್ಮಾನ ಮಾಡಿದ್ದೇವೆ ಎಂದರು. ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್, 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇಕಡಾ 10 ರಷ್ಟು ಸೇರಿಸಿ, ಅದಕ್ಕೆ ಸಂಪೂರ್ಣ […]

ಬೆಂಗಳೂರು : ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳ ಕುರಿತ ಸಂಪುಟ ತೀರ್ಮಾನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಇಂದು ಮಾಹಿತಿ ನೀಡಿದರು.

ಜನ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ನಾವು ಬಸವಣ್ಣನ ನಾಡಿನವರು. ಕೊಟ್ಟ ಮಾತಿಗೆ ಬದ್ಧ.
5 ಗ್ಯಾರಂಟಿಗಳನ್ನು ನೀಡುವ ಸಂಬಂಧ ತೀರ್ಮಾನ ಮಾಡಿದ್ದೇವೆ ಎಂದರು. ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್, 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇಕಡಾ 10 ರಷ್ಟು ಸೇರಿಸಿ, ಅದಕ್ಕೆ ಸಂಪೂರ್ಣ ಶುಲ್ಕ ವಿನಾಯಿತಿ. ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ನಿಂದ ಅನ್ವಯ. ಬಾಡಿಗೆದಾರರಿಗೂ ಅನ್ವಯ. ಗೃಹಲಕ್ಷ್ಮಿ ಯೋಜನೆಯಲ್ಲಿ ಆಧಾರ್ ಕಾರ್ಡ್, ಅಕೌಂಟ್ ಡೀಟೇಲ್ಸ್, ಆನ್ಲೈನ್ ಆಫ್ ಲೈನ್ ಅರ್ಜಿ ಆಧರಿಸಿ ಆಗಸ್ಟ್ 15 ರಿಂದ ಜಾರಿ. ಜೂನ್ 15 ರಿಂದ ಜುಲೈ 15 ರೊಳಗೆ ಡೀಟೇಲ್ಸ್ ಜತೆ ಅರ್ಜಿ ಸಲ್ಲಿಸಬೇಕು.

ಬಿಪಿಎಲ್ ಅಂಡ್ ಎಪಿಎಲ್ ಕಾರ್ಡ್ ದಾರರಿಗೆ ಸಿಗುತ್ತದೆ. ಮನೆ ಯಜಮಾನಿಯನ್ನು ಕುಟುಂಬದವರೇ ತೀರ್ಮಾನ ಮಾಡಬೇಕು.
ಸಾಮಾಜಿಕ ಭದ್ರತೆ ಪಿಂಚಣಿದಾರರಿಗೂ 2000 ರೂ. ಕೊಡಲಾಗುವುದು. ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ತಲಾ10 ಕೆಜಿ ಆಹಾರಧಾನ್ಯ ಕೊಡಲಾಗುವುದು.
ವಿದ್ಯಾರ್ಥಿನಿಯರು ಸೇರಿದಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಅವಕಾಶ.
ಬಿಎಂಟಿಸಿ ಬಸ್ ಸೇವೆಯನ್ನು ಬಳಸಬಹುದು.
ಎಸಿ ಮತ್ತು ಲಕ್ಸುರಿ ಬಸ್ ಹೊರತುಪಡಿಸಿ ಸಾಮಾನ್ಯ ಬಸ್ ಗಳಿಗೆ ಮಾತ್ರ ಅನ್ವಯ.
ಕೆಎಸ್ ಆರ್ಟಿಸಿಯಲ್ಲಿ 50 % ಸೀಟು ಪುರುಷರಿಗೆ ಮೀಸಲು. ಐರಾವತ, ರಾಜಹಂಸ ಸೇರಿ ಎಲ್ಲ ರೀತಿಯ ಲಕ್ಸ್ಯೂರಿ ಬಸ್, ಎಸಿ ಮತ್ತು ನಾನ್ ಎಸಿ ಸ್ಲೀಪರ್ ಬಸ್ ಗಳಿಗೆ ಇದು ಅನ್ವಯ ಆಗದು.

ಯುವನಿಧಿ ಯೋಜನೆಯಲ್ಲಿ 2023 ರಲ್ಲಿ ಪದವಿ ಪಾಸ್ ಮಾಡಿದವರಿಗೆ 24 ತಿಂಗಳು ಪ್ರತಿ ತಿಂಗಳು 3000, ಡಿಪ್ಲೋಮದಾರರಿಗೆ 1500 ರು ಭತ್ಯೆ. ತೃತೀಯ ಲಿಂಗಿಗಳಿಗೂ ಅನ್ವಯ. 18 ವರ್ಷದಿಂದ 35 ವರ್ಷದವರಿಗೆ ಅನ್ವಯವಾಗಲಿದೆ ಎಂದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.