ಕಾಪುವಿನಲ್ಲಿ ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣಾ ದಿನಾಚರಣೆ
(Kaup) ಕಾಪು: ಕಾಪು ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಆಶ್ರಯದಲ್ಲಿ ಸೋಮವಾರ ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದ ಶ್ರೀ ನಾಗಲಿಂಗ ಸ್ವಾಮಿ ಸಭಾಭವನದಲ್ಲಿ ನಡೆದ “ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ (KAUP MLA Gurme Suresh Shetty) ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಲೆ ಮತ್ತು ವಾಸುಶಿಲ್ಪ ಕ್ಷೇತ್ರಕ್ಕೆ ಅಮರ ಶಿಲ್ಪಿ ಜಕಣಾಚಾರ್ಯರ ಕೊಡುಗೆ ಅಪಾರ ಎಂದರು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರ್ ಪ್ರತಿಭಾ ಆರ್ (kaup tahashildara Prathibha R), ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶೇಖರ ಆಚಾರ್ಯ, ಶ್ರೀ ಕಾಳಿಕಾಂಬ ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.) ಕಾಪು ಅಧ್ಯಕ್ಷರಾದ ಸುಧಾಕರ ಆಚಾರ್ಯ ಬಿಳಿಯಾರು, ದಿನೇಶ್ ಆಚಾರ್ಯ ಎರ್ಮಾಳು, ಕಾಪು ತಾಲೂಕು ಪಂಚಾಯತ್ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ ಉಪಸ್ಥಿತರಿದ್ದರು.

