• Home  
  • ಕಾಪುವಿನಲ್ಲಿ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆ (76th Republic Day celebration at taluk level in Kaup)
- fastival - ವಿಡಿಯೋ

ಕಾಪುವಿನಲ್ಲಿ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆ (76th Republic Day celebration at taluk level in Kaup)

Share: ಕಾಪುವಿನಲ್ಲಿ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆ   (Kaup) ಕಾಪು: ಕಾಪು ತಾಲೂಕು ಆಡಳಿತದ ವತಿಯಿಂದ ಭಾನುವಾರ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾಪು ತಹಶೀಲ್ದಾರರಾದ ಡಾ. ಪ್ರತಿಭಾ ಆರ್ ರವರು ಧ್ವಜಾರೋಹಣಗೈದು, ನಾಡಿಗೆ ಗಣರಾಜ್ಯೋತ್ಸವದ ಸಂದೇಶ ನೀಡಿದರು. ಅವರು ತಮ್ಮ ಸಂದೇಶದಲ್ಲಿ ಭಾರತ ದೇಶವು ಪ್ರಗತಿ ಪಥದತ್ತ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ದೇಶ ಅಭಿವೃದ್ಧಿಯಲ್ಲಿ ಮೊದಲನೇ ಸಾಲಿಗೆ ಏರಲಿದೆ ಎಂದು ಹೇಳಿದರು. ಕಾಪು […]

ಕಾಪುವಿನಲ್ಲಿ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆ  

(Kaup) ಕಾಪು: ಕಾಪು ತಾಲೂಕು ಆಡಳಿತದ ವತಿಯಿಂದ ಭಾನುವಾರ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾಪು ತಹಶೀಲ್ದಾರರಾದ ಡಾ. ಪ್ರತಿಭಾ ಆರ್ ರವರು ಧ್ವಜಾರೋಹಣಗೈದು, ನಾಡಿಗೆ ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಅವರು ತಮ್ಮ ಸಂದೇಶದಲ್ಲಿ ಭಾರತ ದೇಶವು ಪ್ರಗತಿ ಪಥದತ್ತ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ದೇಶ ಅಭಿವೃದ್ಧಿಯಲ್ಲಿ ಮೊದಲನೇ ಸಾಲಿಗೆ ಏರಲಿದೆ ಎಂದು ಹೇಳಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಮಹಾತ್ಮಾ ಗಾಂಧಿ ಮತ್ತು ಬಿ ಆರ್‌ ಅಂಬೇಡ್ಕರ್‌ ರವರ ಛಾಯಾಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  

ಕಾರ್ಯಕ್ರಮದಲ್ಲಿ ಆಯುರ್ವೇದ ಪಂಡಿತ ಸುಧಾಕರ್ ಸಾಲಿಯಾನ್, ಶಿಕ್ಷಕ ನೀಲಾನಂದ ನಾಯಕ್ ಮತ್ತು ಸಮಾಜ ಸೇವಕ ಸೂರಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಪರಿಸರದ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

 ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷೆ ಕುಮಾರಿ  ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿ ನಾಗರಾಜ್, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಗೋಪಾಲಕೃಷ್ಣ ಗಾಂವ್ಕರ್‌, ಕಾಪು ಪುರಸಭಾಧಿಕಾರಿ ನಾಗರಾಜ್‌, ಕಾಪು ಪೊಲೀಸ್‌ ವೃತ್ತನಿರೀಕ್ಷಕಿ ಶ್ರೀಮತಿ ಜಯಶ್ರೀ ಮಾನೆ, ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ, ಕಾಪು ಠಾಣಾಧಿಕಾರಿ ತೇಜಸ್ವಿ, ಶಿರ್ವ ಠಾಣಾಧಿಕಾರಿ ಶಕ್ತಿವೇಲು, ಅಪರಾಧ ವಿಭಾಗದ ಅನಿಲ್‌ ಕುಮಾರ್‌, ಕ್ರೀಡಾಧಿಕಾರಿ ರಿತೇಶ್‌ ಕುಮಾರ್‌ ಶೆಟ್ಟಿ, ಹಾಗೂ ಕಾಪು ಪುರಸಭೆಯ ಸದಸ್ಯರು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾಮ ಆಡಳಿತಾಧಿಕಾರಿ ಶ್ರೀನಿವಾಸ ಸ್ವಾಗತಿಸಿದರು. ಗೋಪಾಲ ಶೆಟ್ಟಿ ತೆಕ್ಕಟ್ಟೆ ನಿರೂಪಿಸಿದರು. ರಿತೇಶ್‌ ಕುಮಾರ್‌ ಶೆಟ್ಟಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.