• Home  
  • ಕಾಪುವಿನಲ್ಲಿ ಬಿಜೆಪಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ
- ಕರಾವಳಿ - ರಾಜಕೀಯ

ಕಾಪುವಿನಲ್ಲಿ ಬಿಜೆಪಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

Share:  ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ   ಕಾಪು ಪೇಟೆಯಲಿ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರಕಾರದ ವಿರುಧ್ಧ ಪ್ರತಿಭಟನಾ ಸಭೆ ನಡೆಯಿತು.  ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಸರಕಾರ 200 ಯುನಿಟ್ ವಿದ್ಯುತ್ ಎಲ್ಲರಿಗೂ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಹೆಚ್ಚು ಮಾತ್ರ ಉಚಿತ ಎಂದು ಹೇಳಿ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟ ರಾಗಿದ್ದಾರೆ.  ಅಲ್ಲದೆ ಪ್ರತಿ ಯುನಿಟ್ […]

 ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ   ಕಾಪು ಪೇಟೆಯಲಿ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರಕಾರದ ವಿರುಧ್ಧ ಪ್ರತಿಭಟನಾ ಸಭೆ ನಡೆಯಿತು.

 ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಸರಕಾರ 200 ಯುನಿಟ್ ವಿದ್ಯುತ್ ಎಲ್ಲರಿಗೂ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಹೆಚ್ಚು ಮಾತ್ರ ಉಚಿತ ಎಂದು ಹೇಳಿ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟ ರಾಗಿದ್ದಾರೆ.

 ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು 70 ಪೈಸೆ ಯಷ್ಟು ವಿದ್ಯತ್ ದರ ಏರಿಸಿ ಜನವಿರೋಧಿ ನೀತಿ ತೋರಿಸಿದ್ದಾರೆ.

 ಪಶುಸಂಗೋಪನಾ ಇಲಾಖೆಯ ಸಚಿವರಾದ ವೆಂಕಟೇಶ್ ರವರು ಗೋವುಗಳನ್ನು ಯಾಕೆ ಕಡಿಯಬಾರದು ಎಂದು ಹಿಂದೂಗಳ ಭಾವನೆಗಳ ಮೇಲೆ ಚೆಲ್ಲಾಟವಾಡುವ ಮಾತನ್ನಾಡಿದ್ದಾರೆ. ಗೋವುಗಳೆಂದರೆ ಭಾರತೀಯರಿಗೆ ಪರಮ‌ ಪವಿತ್ರವಾದದು. ಯಾವುದೇ ಕೆಲಸ ಶುಭಾರಂಭ ಮಾಡುವುದಾದರೆ ಮೊದಲು ಗೋಪೂಜೆ ಮಾಡುವರು. ಗ್ರಹಪ್ರವೇಶ ಮಾಡುವುದಾರೂ ಮೊದಲು ಗೋವನ್ನು ಪ್ರವೇಶ ಮಾಡಿಸಿ ನಂತರ ನಾವು ಪ್ರವೇಶ ಮಾಡುವೆವು. ಭಾರತೀಯರದ್ದ ಗೋವು ಆಧಾರಿತ ಕ್ರಷಿ ಜೀವನ ಪಧ್ಧತಿ ಇದ್ದುದು. ಅಂತಹ ಗೋವುಗಳನ್ನು ಕಡಿಯುವ ಮಾತನ್ನಾಡುವ ಮೂಲಕ ನಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವರು. ಈ ಕಾಯ್ದೆ ಹಿಂಪಡೆಯುವ ಪ್ರಯತ್ನ ಮಾಡಿದಲ್ಲಿ ಬಿಜೆಪಿ ಕಾರ್ಯಕರ್ತರು ನಿಮ್ಮ ಮುಂದಿನ ಎಲ್ಲ ಕಾರ್ಯಕ್ರಮಗಳಿಗೆ ಕಪ್ಟು ಬಾವುಟ ತೋರಿಸಿ ಪ್ರತಿಭಟನೆ ಮಾಡುತ್ತೇವೆ ಎಂದರು.  ಈ ಸಂದರ್ಭದಲ್ಲಿ ಕಾಪು‌ ಮಂಡಲ ಉಪಾಧ್ಯಕ್ಷರಾದ ನವೀನ್ ಎಸ್ ಕೆ, , ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕ್ರಷ್ಣ ರಾವ್, ಸುಧಾಮ ಶೆಟ್ಟಿ ಲತಾ ಆಚಾರ್ಯ, ಚಂದ್ರ ಮಲ್ಲಾರ್,   ಸುಮಾ ಶೆಟ್ಟಿ,  ನಾಗೇಂದ್ರ,  ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಶೈಲೇಶ್, ಶರಣ್ ಕುಮಾರ್ ಮಟ್ಟು, ಪ್ರವೀಣ್ ಶೆಟ್ಟಿ ಇನ್ನಂಜೆ, ದಿನೇಶ್ ಕೋಟ್ಯನ್, ಜಗದೀಶ್ ಮೆಂಡನ್, ಶೈಲೇಶ್ ಶೆಟ್ಟಿ, ರಮಾ ಶೆಟ್ಟಿ, ಗೌರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು

Leave a comment

Your email address will not be published. Required fields are marked *

eMedia Kannada  @2025. All Rights Reserved.