ಕಾಪುವಿನಲ್ಲಿ ಸಮಾಜ ರತ್ನ ದಿ. ಲೀಲಾಧರ ಶೆಟ್ಟಿ, ವಸುಂದರಾ ಶೆಟ್ಟಿ ಸಂಸ್ಮರಣೆ (Samaja rathna K Leeladhara Shetty, Vasundara Shetty obituary in Kaup)
ಕಾಪುವಿನಲ್ಲಿ ಸಮಾಜ ರತ್ನ ದಿ. ಲೀಲಾಧರ ಶೆಟ್ಟಿ, ವಸುಂದರಾ ಶೆಟ್ಟಿ ಸಂಸ್ಮರಣೆ
(Kaup) ಕಾಪು: ಕಾಪುವಿನ ಸಮಾಜ ಸೇವಕ, ಸಮಾಜ ರತ್ನ ದಿವಂಗತ ಲೀಲಾಧರ ಶೆಟ್ಟಿ ಮತ್ತು ವಸುಂದರಾ ಶೆಟ್ಟಿ ಅವರ ನಿಧನದ ವರ್ಷಾಚರಣೆ ಗುರುವಾರ ಕಾಪು ಶ್ರೀ ವೀರಭದ್ರ ಸಭಾಭವನದಲ್ಲಿ ನೆರವೇರಿತು.
ಕಾರ್ಯಕ್ರಮವನ್ನು ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದ ಮೊಕ್ತೇಸರ ಮನೋಹರ ಎಸ್ ಶೆಟ್ಟಿ ಉದ್ಘಾಟಿಸಿದರು.
ಅವರು ಈ ಸಂದರ್ಭ ಮಾತನಾಡಿ, ನಾವು ಜೀವನದಲ್ಲಿ ಯಾವುದಾದರೂ ಒಳ್ಳೆಯ ಕೆಲಸ ಮಾಡಿ ಸ್ವಲ್ಪವಾದರೂ ಸಮಾಜ ಸೇವೆ ಮಾಡೋಣ. ದಿ. ಲೀಲಾಧರ ಶೆಟ್ಟಿಯವರು ನಮ್ಮನ್ನು ಆಗಲಿ ಒಂದು ವರ್ಷವಾದರೂ ಅವರು ಮಾಡಿದ ಸಮಾಜ ಸೇವೆ ನಿತ್ಯ ನಿರಂತರ ಎಂದು ಹೇಳಿದರು.
ಕಾಪು ತಹಸೀಲ್ದಾರ್ ಡಾ. ಪ್ರತಿಭಾ ಆರ್ ಮಾತನಾಡಿ, ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಅವರ ಸಾಮಾಜಿಕ ಸೇವೆ, ರಕ್ತದಾನ ಶಿಬಿರ, ಅಶಕ್ತರಿಗೆ, ಶಾಲಾ ಮಕ್ಕಳಿಗೆ ನೀಡಿದ ಸಹಾಯ ಎಂದೂ ಮರೆಯಲಾಗದ ಉದಾಹರಣೆಯಾಗಿದೆ ಎಂದರು.
ಈ ಸಂದರ್ಭ ಮುಳುಗು ತಜ್ಞ ಅಶೋಕ್ ಶೆಟ್ಟಿ ದೆಂದೂರು ದಂಪತಿಗಳನ್ನು ಹಾಗೂ ಪುರ ಸಭಾ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.
ಗಣ್ಯರು ದಿ. ಲೀಲಾಧರ ಶೆಟ್ಟಿ ದಂಪತಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭ ಬೃಹತ್ ರಕ್ತದಾನ ಶಿಬಿರ ನೆರವೇರಿತು.
ವೇದಿಕೆಯಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಪುರಸಭಾಧ್ಯಕ್ಷೆ ಕುಮಾರಿ ಹರಿನಣಾಕ್ಷಿ ದೇವಾಡಿಗ, ಶ್ರೀಧರ್ ಶೆಟ್ಟಿ ಮುಲುಂಡ್, ಯೋಗೇಶ್ ಶೆಟ್ಟಿ, ಜಯಲಕ್ಷ್ಮಿ ಸುರೇಶ್ ಶೆಟ್ಟಿ, ಪ್ರಭಾಕರ್ ಪೂಜಾರಿ, ಡಾ. ವೀಣಾ ಕುಮಾರಿ, ಡಾ. ರಾಜಶ್ರೀ ಕಿಣಿ, ಮೋಹನ್ ದಾಸ್ ಶೆಟ್ಟಿ ಕರಂದಾಡಿ, ಕುತ್ಯಾರು ಪ್ರಸಾದ್ ಶೆಟ್ಟಿ, ರಮೇಶ್ ಶೆಟ್ಟಿ ಜಾರ್ಕಳ ಮತ್ತಿತರರು ವೇದಿಕೆಯಲ್ಲಿದ್ದರು.
ಪ್ರಭಾತ್ ಶೆಟ್ಟಿ ಸ್ವಾಗತಿಸಿದರು. ಸೂರಿ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿವಾಕರ್ ಶೆಟ್ಟಿ ಮಲ್ಲಾರು ನಿರೂಪಿಸಿದರು.