• Home  
  •  ಕಾಪು ಅಟಲ್‌ಜೀ ಅವರ ಜನ್ಮ ಶತಾಬ್ದಿ :ತ್ರಿದಿನ ಕಡಲೋತ್ಸವಕ್ಕೆ ತೆರೆ (Birth centenary of Kaup Atalji: Three-day sea festival begins)
- fastival

 ಕಾಪು ಅಟಲ್‌ಜೀ ಅವರ ಜನ್ಮ ಶತಾಬ್ದಿ :ತ್ರಿದಿನ ಕಡಲೋತ್ಸವಕ್ಕೆ ತೆರೆ (Birth centenary of Kaup Atalji: Three-day sea festival begins)

Share:  ಕಾಪು ಅಟಲ್‌ಜೀ ಅವರ ಜನ್ಮ ಶತಾಬ್ದಿ :ತ್ರಿದಿನ ಕಡಲೋತ್ಸವಕ್ಕೆ ತೆರೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಉತ್ತಮ ನೇತೃತ್ವ ಹೊಗಳಿದ ಆರ್‌ ಅಶೋಕ್ (kaup) ಕಾಪು : ಕಾಪು ಪಡು ಕಡಲ ಕಿನಾರೆಯಲ್ಲಿ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ದಿ ಪ್ರಯುಕ್ತ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಮೂರನೇ ದಿನದ  ಕಾಪು ಕಡಲ ಪರ್ಬದ ಸಮಾರೋಪ ಸಮಾರಂಭ ಭಾನುವಾರ ಸಂಜೆ ನೆರವೇರಿತು.  […]

(kaup) ಕಾಪು : ಕಾಪು ಪಡು ಕಡಲ ಕಿನಾರೆಯಲ್ಲಿ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ದಿ ಪ್ರಯುಕ್ತ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಮೂರನೇ ದಿನದ  ಕಾಪು ಕಡಲ ಪರ್ಬದ ಸಮಾರೋಪ ಸಮಾರಂಭ ಭಾನುವಾರ ಸಂಜೆ ನೆರವೇರಿತು. 

   ಗೌರವ ಅತಿಥಿಯಾಗಿ ವಿಧಾಸಭಾ ವಿಪಕ್ಷ ನಾಯಕ ಆರ್. ಅಶೋಕ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

‌   ಅವರು ಮಾತನಾಡಿ, ಕರ್ನಾಟಕದ ಪಾಲಿಗೆ ಕಾಂಗ್ರೆಸ್ ಸತ್ತು ಹೋಗಿರುವ ಸರಕಾರವಾಗಿದೆ. ಯಾವುದೇ ಅಭಿವೃದ್ಧಿ ಕಾಣುತ್ತಿಲ್ಲ. 16 ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರಕಾರ ಅವರು ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಮೋಸ ಮಾಡಿದ್ದಾರೆ. ಕರ್ನಾಟಕದ ಬಜೆಟ್ 4 ಲಕ್ಷ ಕೋಟಿ ರೂ. ಆಗಿದ್ದರೂ, ಸಿದ್ಧರಾಮಯ್ಯರ ಸರಕಾರ 2 ವರ್ಷದ ಆಡಳಿತದಲ್ಲಿ 2 ಲಕ್ಷ ಕೋಟಿ ರೂ. ಸಾಲ ಮಾಡಿದ್ದು, ಈ ಬಾರಿ ಮತ್ತೆ 1 ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾಗಿದ್ದಾರೆ ಎಂದರು.

  ಅಟಲ್‌ ಬಗ್ಗೆ ಮಾತನಾಡಿದ ಅವರು, ಎಲ್ಲರನ್ನೂ ಪ್ರೀತಿಯಿಂದ ಕಂಡಂತಹ, ಹಮ್ಮು, ಬಿಮ್ಮು ಇಲ್ಲದ ಸರಳ ವ್ಯಕ್ತಿತ್ವದ ನಾಯಕರೆಂದರೆ ಅಟಲ್ ಬಿಹಾರಿ ವಾಜಪೇಯಿ ಎಂದರು.

    ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಕಾಪು ಕಡಲ ಪರ್ಬದ ಯಶಸ್ಸನ್ನು ಶಾಘಿಸಿದರು.

   ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.

  ಸಮಾರಂಭದಲ್ಲಿ ಸಾಧಕರಾದ ಡಾ. ಬಿ. ದೇವದಾಸ್ ಕಾಮತ್, ಕುದಿ ಶ್ರೀನಿವಾಸ ಭಟ್ ಅವರನ್ನು ಅಟಲ್ ಸಾಧನಾ ಪ್ರಶಸ್ತಿ ಪ್ರಧಾನಿಸಿ ಗೌರವಿಸಲಾಯಿತು.

   ಹಿರಿಯ ಬಿಜೆಪಿಗರನ್ನು ಗುರುತಿಸಿ ಗೌರವಿಸಲಾಯಿತು. 10 ವಿಶ್ವ ದಾಖಲೆಯ ಸರದಾರಣಿ  ತನುಶ್ರೀ ಪಿತ್ರೋಡಿ, ಹಾಗೂ ವಿದುಷಿ ದೀಕ್ಷಾ ವಿ. ಅವರನ್ನು ಸನ್ಮಾನಿಸಲಾಯಿತು.

   ಈ ಸಂದರ್ಭ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಜೆ.ಡಿ.ಎಸ್ ಜಿಲ್ಲಾಧ್ಯಕ್ಷ   ಯೋಗೀಶ್ ಶೆಟ್ಟಿ ಬಾಲಾಜಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ, ರಾಜ್ಯ ಎಸ್.ಸಿ.  ಮೋರ್ಚಾದ ಉಪಾಧ್ಯಕ್ಷ ದಿನಕರ ಬಾಬು, ಕಾಪು ಪುರಸಭಾ ಸದಸ್ಯ ನಿತಿನ್, ಕಾಪು ಕಡಲ ಪರ್ಬದ ಗೌರವಾಧ್ಯಕ್ಷ, ನಿಕಟಪೂರ್ವ ಶಾಸಕ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಬಿಜೆಪಿ  ಪ್ರಧಾನ ಕಾರ್ಯದರ್ಶಿ ರೇಷ್ಮಾ ಶೆಟ್ಟಿ , ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸಂಧ್ಯಾ ರಮೇಶ್, ರಾಷ್ಟ್ರೀಯ  ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಒಬಿಸಿ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಯುವಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಎಸ್.ಸಿ. ಮೋರ್ಚಾ ಅಧ್ಯಕ್ಷ ಪಾರ್ಥ ಸಾರಥಿ, ರೈತ ಮೋರ್ಚಾ ಅಧ್ಯಕ್ಷ ಕೃಷ್ಣ ರಾವ್ ಮೊದಲಾದವರು ಉಪಸ್ಥಿತರಿದ್ದರು.

ಗಾಯತ್ರಿ ಪ್ರಭು ಪಲಿಮಾರು ವಂದೇ ಮಾತರಂ ಹಾಡಿದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ವಂದಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ , ಸಂತೋಷ್ ನಂಬಿಯಾರ್ ನಿರೂಪಿಸಿದರು.

ಉಡುಪಿ ಆದರ್ಶ ಆಸ್ಪತ್ರೆ ಸಹಯೋಗದೊಂದಿಗೆ ಬೃಹತ್ ಆರೋಗ್ಯ ಶಿಬಿರ,  ಪುರುಷರ ವಾಲಿಬಾಲ್ ಪಂದ್ಯಾಟ, ಮಹಿಳೆಯರ ತ್ರೋಬಾಲ್ ಪಂದ್ಯಾಟ ನಡೆದಿದ್ದು, ರಾತ್ರಿ ವ್ಯೋಮ್ ಡಾನ್ಸ್ ತಂಡದಿಂದ ಆಕರ್ಷಕ ನೃತ್ಯ ಪ್ರದರ್ಶನಗೊಂಡಿತು.

   ಖ್ಯಾತ ಸಂಗೀತಗಾರ ಕುನಾಲ್ ಗಾಂಜಾವಾಲಾರವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.