• Home  
  •   ಕಾಪು   ಆಡಳಿತ ಸೌಧದ ತಾಲ್ಲೂಕು ಕಚೇರಿ ಸಭಾಭವನದಲ್ಲಿ ಕಾಪು ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ಸಂಪನ್ನ (Kaup thaluk level pension Adalath)
- ಪ್ರಚಲಿತ

  ಕಾಪು   ಆಡಳಿತ ಸೌಧದ ತಾಲ್ಲೂಕು ಕಚೇರಿ ಸಭಾಭವನದಲ್ಲಿ ಕಾಪು ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ಸಂಪನ್ನ (Kaup thaluk level pension Adalath)

Share: ಕಾಪು   ಆಡಳಿತ ಸೌಧದ ತಾಲ್ಲೂಕು ಕಚೇರಿ ಸಭಾಭವನದಲ್ಲಿ ಕಾಪು ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ಸಂಪನ್ನ   (Kaup) ಕಾಪು: ಕಾಪು ಆಡಳಿತ ಸೌಧದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ  ಶುಕ್ರವಾರ ಬೆಳಿಗ್ಗೆ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಎಸ್ ಆರ್ (Rashmi SR) ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ನಡೆಯಿತು. ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, […]

ಕಾಪು   ಆಡಳಿತ ಸೌಧದ ತಾಲ್ಲೂಕು ಕಚೇರಿ ಸಭಾಭವನದಲ್ಲಿ ಕಾಪು ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ಸಂಪನ್ನ

  (Kaup) ಕಾಪು: ಕಾಪು ಆಡಳಿತ ಸೌಧದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ  ಶುಕ್ರವಾರ ಬೆಳಿಗ್ಗೆ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಎಸ್ ಆರ್ (Rashmi SR) ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ನಡೆಯಿತು.

ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪಿಂಚಣಿ ಅದಾಲತ್‌ ನಡೆಯಿತು.

ಈ ಸಂದರ್ಭ  ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಎಸ್ ಆರ್ ರವರು ಮಾತನಾಡಿ,   ಕಾಪು ತಾಲ್ಲೂಕು ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟ ಪಿಂಚಣಿಗಾಗಿ ಈಗಾಗಲೇ ಅರ್ಜಿ ಸಲ್ಲಿಸಿ ಕೋರಿಕೆ ತಿರಸ್ಕೃತಗೊಂಡಿರುವವರು ಪಿಂಚಣಿ ಬಾರದಿರುವವ ಹಾಗೂ ಪಿಂಚಣಿಗೆ ಸಂಬಂಧಿಸಿದ ಇನ್ನಿತರ ದೂರುಗಳ ಫಲಾನುಭವಿಗಳು ಹಾಜರಾಗಿ ಪರಿಹಾರ ಕಂಡುಕೊಂಡಿದ್ದಾರೆ.

ಕಾಪುವಿನಲ್ಲಿ ೪೨ ಅರ್ಜಿದಾರರಿಗೆ ಪಿಂಚಣಿ ಅದಾಲತ್‌ಗೆ ಹಾಜರಾಗಲು ಸೂಚಿಸಲಾಗಿದೆ. ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಕೆಲವೊಂದು ಕಡತಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ ಎಂದೂ ರಶ್ಮಿ ಎಸ್ ಆರ್  ತಿಳಿಸಿದ್ದಾರೆ.

  ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ (Kaup Thahashildar DR Prathibha R) ರವರು  ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.