• Home  
  •  ಕಾಪು : ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ತಹಶಿಲ್ದಾರ್‌ ಕಛೇರಿ ಎದುರು ಪ್ರತಿಭಟನೆ (Kaup: Congress committee protests in front of Tahsildar’s office against the failure of the central government)
- protest - ರಾಜಕೀಯ

 ಕಾಪು : ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ತಹಶಿಲ್ದಾರ್‌ ಕಛೇರಿ ಎದುರು ಪ್ರತಿಭಟನೆ (Kaup: Congress committee protests in front of Tahsildar’s office against the failure of the central government)

Share:  ಕಾಪು : ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ತಹಶಿಲ್ದಾರ್‌ ಕಛೇರಿ ಎದುರು ಪ್ರತಿಭಟನೆ (ಕಾಪು) : ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಕಾಪು ತಶಿಲ್ದಾರ್‌ ಕಛೇರಿ ಎದುರು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.    ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕರ್ನಾಟಕ ಕಾಂಗ್ರೆಸ್ ಸರಕಾರದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡಿದಂತೆ ಪಂಚ ಗ್ಯಾರಂಟಿಯನ್ನು […]

(ಕಾಪು) : ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಕಾಪು ತಶಿಲ್ದಾರ್‌ ಕಛೇರಿ ಎದುರು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

   ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕರ್ನಾಟಕ ಕಾಂಗ್ರೆಸ್ ಸರಕಾರದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡಿದಂತೆ ಪಂಚ ಗ್ಯಾರಂಟಿಯನ್ನು ಅನುಷ್ಠಾನಕ್ಕೆ ತಂದು ಜನರ ಮನವನ್ನು ಗೆದ್ದಿದ್ದಾರೆ. ಈ ಗ್ಯಾರಂಟಿಯಿಂದಾಗಿ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇದನ್ನು ಸಹಿಸಲಾಗದೆ ಬಿಜೆಪಿ ಪಕ್ಷದವರು ಕಕ್ಕಾಬಿಕ್ಕಿಯಾಗಿ ಏನು ಮಾಡಲು ತೋಚದೆ ಕಾಂಗ್ರೆಸ್ ಪಕ್ಷದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕುಣಿಯಲು ಬಾರದವನು ನೆಲ ಡೊಂಕು ಎಂಬ ಗಾದೆಯ ಮಾತನ್ನು ವಿಶ್ಲೇಷಿಸಿ, ಕಾಪು ಶಾಸಕರು ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ಕೊಡಿಸಲಿ ಎಂದರು.

  ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಗ್ರಾಮಸ್ಥರಿಗೆ ಇದರ ಬಗ್ಗೆ ಸತ್ಯ ತಿಳುವಳಿಕೆಯನ್ನು ನೀಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಕೈಗೊಂಡು, ಹದಿನಾರು ಪಂಚಾಯತ್ ಗಳಲ್ಲಿ  ಬಿಜೆಪಿಯವರ ಸುಳ್ಳು ಮತ್ತು ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ ಮಾಡುವುದರ ಮುಖೇನ ನೈಜತೆಯನ್ನು ಜನತೆಯ ಮುಂದೆ ಇಡುವ ಕೆಲಸವನ್ನು ಮಾಡುತ್ತಿದ್ದೇವೆ.

ಕೊರೋನ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರಕಾರ ವೈಫಲ್ಯ ಕಂಡಿದೆ. ಇನ್ನು ಮುಂದೆಯಾದರೂ ಜನ ಸಾಮಾನ್ಯರಿಗೆ ಜಿಎಎಸ್‌ ಟಿ ಹೇರದೆ ಸುಳ್ಳುಗಳನ್ನು ಬಿಟ್ಟು ಸರಿಯಾಗಿ ಸರಕಾರ ನಡೆಸಿ. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಕಾಪು ರಾಜೀವ ಭವನದಿಂದ ತಹಶಿಲ್ದಾರ್‌ ಕಛೇರಿವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಕೆಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಮೆರವಣಿಗೆಯಲ್ಲಿ ಸಾಗಿ ಬಂದಿದ್ದಾರೆ.

  ಕಾಂಗ್ರೆಸ್ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಪಡುಬಿದ್ರಿ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್‌ ನಿಯಾಝ್, ನವೀನ್‌ಚಂದ್ರ ಸುವರ್ಣ, ಎಂಎ ಗಫೂರ್‌ಗಣೇಶ್‌ ಕೋಟ್ಯಾನ್‌ ಪಡುಬಿದ್ರಿ, ಶರ್ಫುದ್ಧೀನ್‌ ಶೇಖ್‌, ನವೀನ್‌ ಎನ್‌ ಶೆಟ್ಟಿ, ಜ್ಯೋತಿ ಮೆನನ್‌, ಕಾಪು ದಿವಾಕರ ಶೆಟ್ಟಿ ಮತ್ತು ಕಾಂಗ್ರೆಸ್  ಸದಸ್ಯರುಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.