ಕಾಪು : ಕಾರಿಗೆ ಟ್ರಕ್ ಡಿಕ್ಕಿ, ನಾಲ್ವರಿಗೆ ಗಾಯ
(Kaup)ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ವಿದ್ಯಾನಿಕೇತನ ಶಾಲೆ ಬಳಿ ಕಾರಿಗೆ ಟ್ರಕ್ ಢಿಕ್ಕಿ ಹೊಡೆದ ಘಟನೆ ಬುಧವಾರ ಮಧ್ಯಾಹ್ ನಡೆದಿದೆ .
ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಕಾರಿಗೆ ಅದೇ ದಿಕ್ಕಿಗೆ ಹೋಗುತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಡಿವೈಡರ್ ಮೇಲೆರಿದೆ. ಕಾರಿನಲ್ಲಿ ಇದ್ದ ನಾಲ್ವರು ಸಣ್ಣ ಪುಟ್ಟಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.
ಕೆಲ ಕಾಲ ಹೆದ್ದಾರಿ ಸಂಚಾರದಲ್ಲಿ ತೊಡಕು ಉಂಟಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

