ಕಾಪು – ಕೊಪ್ಪಲಂಗಡಿ : ಟಿಪ್ಪರ್ ಗೆ ಪಿಕಪ್ ವಾಹನ ಡಿಕ್ಕಿ, ಚಾಲಕನಿಗೆ ಗಾಯ
(Kaup) ಕಾಪು: ರಾಷ್ಟೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕೊಪ್ಪಲಂಗಡಿ ಬಳಿ ರಸ್ತೆ ಬದಿ ನಿಂತಿದ್ದ ಟಿಪ್ಪರ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ.
ಗಂಭೀರ ಗಾಯಗೊಂಡ ಪಿಕಪ್ ಚಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

