• Home  
  • ಕಾಪು ಕ್ಷೇತ್ರದಲ್ಲಿ ಅನುದಾನ ಲಭ್ಯತೆಯಲ್ಲಿ ನಾರಾಯಣ ಗುರು ವಸತಿ ಶಾಲೆಗೆ ಕ್ರಮ : ಸಚಿವ ಶಿವರಾಜ ತಂಗಡಗಿ
- ರಾಜಕೀಯ

ಕಾಪು ಕ್ಷೇತ್ರದಲ್ಲಿ ಅನುದಾನ ಲಭ್ಯತೆಯಲ್ಲಿ ನಾರಾಯಣ ಗುರು ವಸತಿ ಶಾಲೆಗೆ ಕ್ರಮ : ಸಚಿವ ಶಿವರಾಜ ತಂಗಡಗಿ

Share: ಬೆಳಗಾವಿ ಅಧಿವೇಶನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಸಚಿವರು (Belgaum) ಬೆಳಗಾವಿ; ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಾರಾಯಣ ಗುರು ವಸತಿ ಶಾಲೆಯನ್ನು ಮಂಜೂರು ಮಾಡುವ ಬಗ್ಗೆ ಸ್ವೀಕೃತವಾಗುವ ಪ್ರಸ್ತಾವನೆಯನ್ನು ಅನುದಾನದ ಲಭ್ಯತೆಯ ಅನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿಯವರು ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರ ಪ್ರಶ್ನೆಗೆ […]

ಬೆಳಗಾವಿ ಅಧಿವೇಶನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಸಚಿವರು

(Belgaum) ಬೆಳಗಾವಿ; ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಾರಾಯಣ ಗುರು ವಸತಿ ಶಾಲೆಯನ್ನು ಮಂಜೂರು ಮಾಡುವ ಬಗ್ಗೆ ಸ್ವೀಕೃತವಾಗುವ ಪ್ರಸ್ತಾವನೆಯನ್ನು ಅನುದಾನದ ಲಭ್ಯತೆಯ ಅನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿಯವರು ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ್ದಾರೆ.   

    ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ.ಜಾತಿ ಮತ್ತು ಪ.ಪಂಗಡದ ಸಮುದಾಯದವರು ಆರ್ಥಿಕವಾಗಿ ಹಿಂದುಳಿದಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ.  ಈ ಸಮುದಾಯದ ವಿದ್ಯಾರ್ಥಿಗಳಿಗೆ ನಾರಾಯಣ ಗುರು ವಸತಿ ಶಾಲೆಯನ್ನು ಮಂಜೂರು ಮಾಡುವ ಬಗೆಗಿನ ಪ್ರಸ್ತಾವನೆ ಸರಕಾರದಲ್ಲಿ ಯಾವ ಹಂತದಲ್ಲಿದೆ ಹಾಗೂ ನಾರಾಯಣ ಗುರು ವಸತಿ ಶಾಲೆಯನ್ನು ಮಂಜೂರು ಮಾಡಿ ಶಾಲೆಗಳಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವಲ್ಲಿ ಸರಕಾರದ ನಿಲುವೇನು ಎಂಬ ಪ್ರಶ್ನೆಯನ್ನು ವಿಧಾನ ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರು ಪ್ರಶ್ನೆಯನ್ನು ಕೇಳಿದ್ದರು.

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ ತಂಗಡಗಿಯವರು ಉತ್ತರಿಸುತ್ತಾ, ಕರ್ನಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಒಟ್ಟು ೮೭೪ ವಸತಿ ಶಾಲಾ ಕಾಲೇಜುಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಈ ಪೈಕಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವ್ಯಾಪ್ತಿಗೆ ಒಳಪಡುವ ನಾಲ್ಕು ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದೆ. ಅದರಲ್ಲಿ ಉಡುಪಿ ಜಿಲ್ಲೆಯ ಕೋಟಾ ಹೋಬಳಿಯ ವಡ್ಡರ್ಸೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಾರಾಯಣ ಗುರು ವಸತಿ ಶಾಲೆಯನ್ನು ಮಂಜೂರು ಮಾಡುವ ಬಗ್ಗೆ ಸ್ವೀಕೃತವಾಗುವ ಪ್ರಸ್ತಾವನೆಯನ್ನು ಅನುದಾನದ ಲಭ್ಯತೆಯ ಅನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಉತ್ತರಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.