• Home  
  • ಕಾಪು ತಹಶಿಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿ (Birth anniversary of Taluk level Nadaprabhu Kempegowda celebrated at Kaup Tehsildar office hall)
- ತಾಲೂಕು ಆಡಳಿತ

ಕಾಪು ತಹಶಿಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿ (Birth anniversary of Taluk level Nadaprabhu Kempegowda celebrated at Kaup Tehsildar office hall)

Share: ಕಾಪು ತಹಶಿಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿ  (Kaup) ಕಾಪು: ಕಾಪು ತಹಶಿಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ “ನಾಡಪ್ರಭು ಕೆಂಪೇಗೌಡರ” ಜಯಂತಿ ಕಾರ್ಯಕ್ರಮವನ್ನು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಆದರ್ಶ ಮುಂದಿನ ಪೀಳಿಗೆಗೆ ದಾರಿದೀಪದಂತೆ. ಅವರ ದೂರದೃಷ್ಟಿಯನ್ನು ನಮ್ಮ ಇಂದಿನ  ಯುವ ಪೀಳಿಗೆ ಮಾದರಿಯಾಗಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು. ಕೆಂಪೇ ಗೌಡ ಜಯಂತಿಯ […]

 (Kaup) ಕಾಪು: ಕಾಪು ತಹಶಿಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ “ನಾಡಪ್ರಭು ಕೆಂಪೇಗೌಡರ” ಜಯಂತಿ ಕಾರ್ಯಕ್ರಮವನ್ನು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಉದ್ಘಾಟಿಸಿದರು.

ಅವರು ಈ ಸಂದರ್ಭ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಆದರ್ಶ ಮುಂದಿನ ಪೀಳಿಗೆಗೆ ದಾರಿದೀಪದಂತೆ. ಅವರ ದೂರದೃಷ್ಟಿಯನ್ನು ನಮ್ಮ ಇಂದಿನ  ಯುವ ಪೀಳಿಗೆ ಮಾದರಿಯಾಗಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.

ಕೆಂಪೇ ಗೌಡ ಜಯಂತಿಯ ಅಂಗವಾಗಿ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ನಡೆಸಲಾಗಿದ್ದು, ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.

 ಶಾಲಾ ವಿದ್ಯಾರ್ಥಿಗಳು ನಾಡ ಪ್ರಭು ಕೆಂಪೇಗೌಡರ ಕುರಿತು ಭಾಷಣ ಮಾಡಿದರು. ಕೆಲವು ಮಕ್ಕಳು ದೇಶಭಕ್ತಿಗೀತೆ ಹಾಡಿದರು.

  ಪುರಸಭಾ ಮುಖ್ಯಾಧಿಕಾರಿ ನಾಗರಾಜ್, ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಉಪ ತಹಶಿಲ್ದಾರ್ ಗಳಾದ ದೇವಕಿ, ರವಿಕಿರಣ್, ಅಶೋಕ್ ಕೋಟೆಕಾರ್, ರೆವಿನ್ಯೂ ಅಧಿಕಾರಿ ಇಜ್ಜಾರ್ ಸಾಬಿರ್, ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮಾಡಳಿತಾಧಿಕಾರಿಗಳು, ಪುರಸಭಾ ಸದಸ್ಯರು, ಶಾಲಾ ಕಾಲೇಜುಗಳ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಉಪಸ್ಥಿತರಿದ್ದರು.

ಲೋಕನಾಥ್ ಸ್ವಾಗತಿಸಿದರು. ದೇವಿಚರಣ್ ಕಾರ್ಯಕ್ರಮ ನಿರೂಪಿಸಿದರು. ದೇವಕಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.