• Home  
  • ಕಾಪು ತಾಲೂಕು ಆಡಳಿತದಿಂದ ಸಂವಿಧಾನ ದಿನಾಚರಣೆ (Constitution Day Celebration by Kapu Taluk Administration)
- ಕಾಪು ತಾಲೂಕು ಆಡಳಿತ

ಕಾಪು ತಾಲೂಕು ಆಡಳಿತದಿಂದ ಸಂವಿಧಾನ ದಿನಾಚರಣೆ (Constitution Day Celebration by Kapu Taluk Administration)

Share: ಕಾಪು ತಾಲೂಕು ಆಡಳಿತದಿಂದ ಸಂವಿಧಾನ ದಿನಾಚರಣೆ    ಅಧ್ಯಕ್ಷತೆ ವಹಿಸಿದ್ದ ಕಾಪು ತಹಶೀಲ್ದಾರ್ ಅನಂತ ಶಂಕರ್    (Kaup) ಕಾಪು : ಕಾಪು ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಕಾಪು ತಾಲೂಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸಂವಿಧಾನ ದಿನಾಚರಣೆಯ ಕಾರ್ಯಕ್ರಮ ಕಾಪು ತಾಲೂಕು ಕಛೇರಿಯ ಸಭಾಂಗಣದಲ್ಲಿ ಜರಗಿತು.     ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ  ಅದಮಾರು ಪೂರ್ಣಪ್ರಜ್ಞ ಪದವಿ […]

(Kaup) ಕಾಪು : ಕಾಪು ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಕಾಪು ತಾಲೂಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸಂವಿಧಾನ ದಿನಾಚರಣೆಯ ಕಾರ್ಯಕ್ರಮ ಕಾಪು ತಾಲೂಕು ಕಛೇರಿಯ ಸಭಾಂಗಣದಲ್ಲಿ ಜರಗಿತು.

    ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ  ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾದ ಮಧುರಾಜ್ ಮಾತನಾಡಿ, ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಜನರನ್ನು ಸಶಕ್ತಗೊಳಿಸಿ, ಸರ್ವರಿಗೂ ಸಮಾನತೆ, ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಒದಗಿಸಿದ ಡಾ. ಬಿ.ಆರ್. ಅಂಬೇಡ್ಕರ್ ರವರ ನೇತೃತ್ವದಲ್ಲಿ ರಚಿತ ಸಂವಿಧಾನವು ದೊಡ್ಡ ಆಧಾರಸ್ತಂಭವಾಗಿದೆ ಎಂದರು.

     ಕಾಪು ತಹಶೀಲ್ದಾರ್ ಅನಂತ ಶಂಕರ್ ರವರು ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಕಾಪು ಪುರಸಭಾ ಮುಖ್ಯಾಧಿಕಾರಿ ಚಂದ್ರಕಲಾ, ಪ. ಜಾತಿ ಮತ್ತು ಪ. ಪಂಗಡದ ಮುಖಂಡರಾದ ಶೇಖರ್ ಹೆಜಮಾಡಿ ಉಪಸ್ಥಿತರಿದ್ದರು.

    ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಛೇರಿ ಅಧಿಕ್ಷಕಿ ವಿಜಯಲಕ್ಷ್ಮೀ ದಿನ್ನಿ ಸ್ವಾಗತಿಸಿದರು. ಪಡುಗ್ರಾಮ ಗ್ರಾಮ ಆಡಳಿತಾಧಿಕಾರಿ ಶ್ರೀನಿವಾಸ ಮೂರ್ತಿ  ಕಾರ್ಯಕ್ರಮ ನಿರೂಪಿಸಿದರು. ಪಡುಬಿದ್ರಿ ಮೆಟ್ರಿಕ್‌  ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಬಸವರಾಜ್ ಹೆಚ್ ಎಲ್. ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.