
ಕಾಪು ತಾಲೂಕು ಆಡಳಿತದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ಹೆಣ್ಣುಮಕ್ಕಳು ವಿದ್ಯಾವಂತರಾಗಿ ಸದೃಡ ಬಾಳುವಂತಾಗಬೇಕು : ಕಾಪು ತಹಶೀಲ್ದಾರ್ ಡಾ. ಪ್ರತಿಭಾ
(Kaup) ಕಾಪು: ಕಾಪು ತಾಲೂಕು ವತಿಯಿಂದ ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕಾಪು ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಚರಿಸಲಾಯಿತು.
ಕಾಪು ದಂಡಾಧಿಕಾರಿ ಡಾ. ಶ್ರೀಮತಿ ಪ್ರತಿಭಾ ಆರ್ರವರು ಧ್ವಜಾರೋಹಣ ಗೈದು, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಅವರು ತಮ್ಮ ಸಂದೇಶದಲ್ಲಿ, ಇಂದು ನಾವು ಆಚರಿಸುತ್ತಿರುವ ಸ್ವಾತಂತ್ರ್ಯ ದಿನಾಚರಣೆ ಹಿರಿಯ ಸ್ವತಂತ್ರ್ಯ ಹೋರಾಟಗಾರರ ದೇಣಿಗೆಯಾಗಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಾಗರಿಕರಾದ ನಮಗಿದೆ. ನಾವು ಕೂಡಾ ನಮ್ಮದೇ ಆದ ಕೊಡುಗೆಯನ್ನು ದೇಶಕ್ಕೆ ನೀಡಬೇಕು. ಹೆಣ್ಣುಮಕ್ಕಳು ವಿದ್ಯಾವಂತರಾಗಿ ಸದೃಡವಾಗಿ, ಪುರುಷರಿಗೆ ಸಮವಾಗಿ ಬಾಳುವಂತಾಗಬೇಕು ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಮಹಾತ್ಮ ಗಾಂದೀಜಿ ಹಾಗೂ ಬಾಬಾಸಾಹೇಬ್ ಅಂಬೆಡ್ಕರ್ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕೋಸ್ಕರ ಸಾವಿರಾರು ಮಂದಿ ವೀರ ಸೇನಾನಿಗಳು ಪ್ರಾಣಾರ್ಪಣೆ ಮಾಡಿದ್ದಾರೆ. 200 ವರ್ಷ ಬ್ರಿಟೀಷರ ದಾಸ್ಯದಿಂದ ಮುಕ್ತವಾದ ದಿನ ಇದಾಗಿದ್ದು, ಮಾತೃ ಭೂಮಿ ಯ ಸ್ವಾತಂತ್ರ್ಯ ಕ್ಕಾಗಿ ಹೋರಾಡಿ ಬಲಿದಾನಗೈದವರ ಬಲಿದಾನ ನಿಷ್ಪ್ರಯೋಜಕ ವಾಗಬಾರದು. ನಾವು ದೇಶ ಕಟ್ಟುವ ಕೆಲಸ ಮಾಡಬೇಕು ಎಂದರು.
ಇದೇ ಸಂದರ್ಭ ಕಾಪು ತಾಲೂಕಿನಲ್ಲಿ ಉತ್ತಮ ಅಂಕ ಗಳಿಸಿದರವರನ್ನು ಸನ್ಮಾನಿಸಲಾಯಿತು. ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆ ಯಲ್ಲಿ ಕಾಪು ತಾಲೂಕು ಪಂಚಾಯತ್ ವಿಸ್ತರಣಾಧಿಕಾರಿ ಜೇಮ್ಸ್ ಡಿಸಿಲ್ವ, ಪುರಸಭಾ ಮುಖ್ಯಾಧಿಕಾರಿ ನಾಗರಾಜ್, ಪೋಲಿಸ್ ವೃತ್ತ ನಿರೀಕ್ಷಕಿ ಜಯಶ್ರೀ ಎಸ್ ಮಾಣೆ, ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿ ರಿತೇಶ್ ಶೆಟ್ಟಿ ಸೂಡ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಮರಾಠೆ ಮತ್ತು ಪುರಸಭಾ ಸದಸ್ಯರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಗೋಪಾಲಕೃಷ್ಣ ಗಾಂವ್ಕರ್ ಸ್ವಾಗತಿಸಿ, ವಂದಿಸಿದರು.
ಕಾಲೇಜು ಬೋಧಕಿ ಸುಚಿತ್ರ ನಿರೂಪಿಸಿದರು.
