• Home  
  • ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ದತ್ತಿನಿಧಿ ವಿತರಣೆ (Press Day celebration and charity fund distribution by Kaup Taluk Working Journalists Association)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ - ಸಹಾಯ ಹಸ್ತ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ದತ್ತಿನಿಧಿ ವಿತರಣೆ (Press Day celebration and charity fund distribution by Kaup Taluk Working Journalists Association)

Share: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ದತ್ತಿನಿಧಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಸೋದೆ ಎಜ್ಯುಕೇಶನ್ ಟ್ರಸ್ಟ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್ (Kaup) ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ ದಿವಂಗತ ಬಿ. ಜಯಂತ್ ಪಡುಬಿದ್ರಿ ಅವರ ಸಂಸ್ಮರಣೆ ಹಾಗೂ ದತ್ತಿನಿಧಿ ವಿತರಣೆ ಕಾರ್ಯಕ್ರಮವು ಶುಕ್ರವಾರ ಇನ್ನಂಜೆಯ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ದಾಸ ಭವನದಲ್ಲಿ ನಡೆಯಿತು.   ಸೋದೆ ವಾದಿರಾಜ […]

(Kaup) ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ ದಿವಂಗತ ಬಿ. ಜಯಂತ್ ಪಡುಬಿದ್ರಿ ಅವರ ಸಂಸ್ಮರಣೆ ಹಾಗೂ ದತ್ತಿನಿಧಿ ವಿತರಣೆ ಕಾರ್ಯಕ್ರಮವು ಶುಕ್ರವಾರ ಇನ್ನಂಜೆಯ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ದಾಸ ಭವನದಲ್ಲಿ ನಡೆಯಿತು.

  ಸೋದೆ ವಾದಿರಾಜ ಮಠ ಎಜ್ಯುಕೇಶನ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಈ ಮೂಲಕ ಜಗತ್ತಿನ ವಿದ್ಯಮಾನಗಳನ್ನು ತಿಳಿದುಕೊಂಡಲ್ಲಿ ಭವಿಷ್ಯದಲ್ಲಿ ಸಾರ್ಥಕ ಜೀವನ ನಡೆಸಲು ಸಾಧ್ಯವಾಗಲಿದೆ ಎಂದರು.

   ಹಿರಿಯ ಜಾನಪದ ಚಿಂತಕ ಡಾ. ವೈ. ಎನ್. ಶೆಟ್ಟಿಯವರು ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ವಿತರಿಸಿ ಮಾತನಾಡಿ, ಪ್ರಸ್ತುತ ಪತ್ರಿಕೋದ್ಯಮ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದೆ. ಈ ರಂಗಕ್ಕೆ ಹೊಸದಾಗಿ ಸೇರ್ಪಡೆಯಾದ ಸಾಮಾಜಿಕ ಮಾಧ್ಯಮಗಳೂ ಕೂಡಾ ಪೈಪೋಟಿ ನೀಡುತ್ತಿದೆ ಎಂದರು.

    ವಿಜಯಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಜಾನ್ ಡಿಸೋಜ ಕುಂದಾಪುರ ಅವರು “ಪತ್ರಿಕೋದ್ಯಮ ಮತ್ತು ವಿದ್ಯಾರ್ಥಿಗಳ ಪಾತ್ರ” ಕುರಿತು ನೀಡಿದ ಉಪನ್ಯಾಸದಲ್ಲಿ,  ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಪುಸ್ತಕ ಅಧ್ಯಯನ ಮಾಡುವ ಮೂಲಕ ಜೀವನ ಪಾಠ ಕಲಿತುಕೊಳ್ಳಬೇಕು ಎಂದರು.

  ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ,  ಕಾರ್ಯದರ್ಶಿ ಸುರೇಶ್ ಎರ್ಮಾಳು, ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿದ್ದರು.

   ಈ ಸಂದರ್ಭ ಪತ್ರಿಕೋದ್ಯಮ ವಿದ್ಯಾರ್ಥಿನಿ ಮಂಗಳ ಶಿವ೯ ಪದವು ಅವರಿಗೆ ದತ್ತಿನಿಧಿ ಹಾಗೂ ಇನ್ನಂಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

   ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದ್ದರು.

 ಜಿಲ್ಲಾ ಸಮಿತಿ ಸದಸ್ಯ ಹರೀಶ್ ಹೆಜಮಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

   ಕಾಪು ಸಂಘದ ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ ಸ್ವಾಗತಿಸಿದರು. ಪ್ರಕಾಶ ಸುವರ್ಣ ಕಟಪಾಡಿ ನಿರೂಪಿಸಿದರು. ಕೋಶಾಧಿಕಾರಿ ಸ೦ತೋಷ್ ಕಾಪು ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.