ಕಾಪು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಕೆ. ಸತ್ಯೇಂದ್ರ ಪೈ ಆಯ್ಕೆ
3 ವರ್ಷ ಸೇವೆ ಸಲ್ಲಿಸಿ ನಿರ್ಗಮಿಸುತ್ತಿರುವ ದಯಾನಂದ ಹೆಜಮಾಡಿಯವರಿಗೆ ಅಭಿನಂದನೆ
(Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಜನಜಾಗೃತಿ ವೇದಿಕೆ ನೂತನ ಅಧ್ಯಕ್ಷರಾಗಿ ಉದ್ಯಮಿ ಕೆ. ಸತ್ಯೇಂದ್ರ ಪೈ ಆಯ್ಕೆಯಾಗಿದ್ದಾರೆ.
ಕಾಪು ಬಿಲ್ಲವ ಸಂಘದ ಬಿಲ್ಲವ ಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವರನ್ನು ಮುಂದಿನ ಅವಧಿಗೆ ಆಯ್ಕೆ ಮಾಡಿ ಶುಭ ಕೋರಲಾಯಿತು.
ಕಾಪು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ 3 ವರ್ಷ ಸೇವೆ ಸಲ್ಲಿಸಿ ನಿರ್ಗಮಿಸುತ್ತಿರುವ ದಯಾನಂದ ಹೆಜಮಾಡಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ವೇದಿಕೆಯ ನಿರ್ಗಮನ ಅಧ್ಯಕ್ಷ ದಯಾನಂದ ಹೆಜಮಾಡಿ, ಮಾಜಿ ಅಧ್ಯಕ್ಷರಾದ ದೇವದಾಸ್ ಹೆಬ್ಬಾರ್, ನವೀನ್ ಅಮೀನ್ ಶಂಕರಪುರ, ಕಾಪು ಶ್ರೀಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಶ್ರೀಮತಿ ಗೀತಾಂಜಲಿ ಎಂ. ಸುವರ್ಣ, ಜನ ಜಾಗೃತಿ ವೇದಿಕೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ, ಶ್ರಿ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಗಣೇಶ್, ರಾಧಾರಮಣ ಶಾಸ್ತ್ರಿ, ಸುಧಾಕರ್ ಕರ್ಕೇರ, ರಾಘವೇಂದ್ರ ಶೆಟ್ಟಿ, ಶ್ರೀಮತಿ ಸುಜಾತಾ ಸುವರ್ಣ, ಶ್ರೀಮತಿ ಸುಮಾ ಶೆಟ್ಟಿ ಉಪಸ್ಥಿತರಿದ್ದರು.

