ಕಾಪು ತಾಲೂಕು ಪತ್ರಕರ್ತರ ಸಂಘದ ದಶಮಾನೋತ್ಸವದ ಲೋಗೋ, ಡೈರೆಕ್ಟರಿ ಬಿಡುಗಡೆ
ದಶಮಾನೋತ್ಸವ ಕಾರ್ಯಕ್ರಮಕ್ಕೆ ಹಾರೈಸಿದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಕುರ್ಯ
(Kaup) ಕಾಪು : ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಲೋಗೋ ಹಾಗೂ ಡೈರೆಕ್ಟರಿಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುರ್ಯ ಬುಧವಾರ ಕಾಪು ಪತ್ರಿಕಾಭವನದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಕಾಪು ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘವು ದಶಮಾನೋತ್ಸವದ ನಿಮಿತ್ತ ಹಮ್ಮಿಕೊಳ್ಳಲಿರುವ ದಶ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕಾರ್ಯದರ್ಶಿ ಸುರೇಶ್ ಎರ್ಮಾಳು, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ, ಕಾರ್ಯದರ್ಶಿ ಪುಂಡಲೀಕ ಮರಾಠೆ, ಕೋಶಾಧಿಕಾರಿ ಸಂತೋಷ್ ನಾಯಕ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳು, ಕಾಪು ತಾಲೂಕು ಪತ್ರಕರ್ತರ ಸಂಘದ ಪೂರ್ವ ಅಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

