• Home  
  •   ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ (Kapu taluk level pre-graduation section throwball tournament started)
- ಕ್ರೀಡೆ

  ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ (Kapu taluk level pre-graduation section throwball tournament started)

Share:   ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟ (Sirva) ಶಿರ್ವ: ಶಾಲಾ ಶಿಕ್ಷಣ ಇಲಾಖೆ ಮತ್ತು ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಶುಕ್ರವಾರ ಇನ್ನಂಜೆಯಲ್ಲಿ ನಡೆಯಿತು.   ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ತ್ರೋಬಾಲ್ ಪಂದ್ಯಾಟ […]

(Sirva) ಶಿರ್ವ: ಶಾಲಾ ಶಿಕ್ಷಣ ಇಲಾಖೆ ಮತ್ತು ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಶುಕ್ರವಾರ ಇನ್ನಂಜೆಯಲ್ಲಿ ನಡೆಯಿತು.

  ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ತ್ರೋಬಾಲ್ ಪಂದ್ಯಾಟ ಉದ್ಘಾಟಿಸಿದರು.

ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಬೆಳೆದು ಬಂದಿರುವ ಪ್ರತಿಭಾವಂತರು ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವುದು ಇತಿಹಾಸ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಕ್ರೀಡಾ ಚಟುವಟಿಕೆಗಳಲ್ಲಿ ಕಡ್ಡಾಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

  ಕಾರ್ಯಕ್ರಮದಲ್ಲಿ ಇನ್ನಂಜೆ ಎಸ್.ವಿ.ಎಚ್. ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನಕುಮಾರ್, ಉಡುಪಿ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ಐತಾಳ್, ಉದಯ್ ಇನ್ನಂಜೆ, ಇನ್ನಂಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಾಲಿನಿ ಶೆಟ್ಟಿ , ಪ್ರಾಂಶುಪಾಲ ರಾಜೇಂದ್ರ ಪ್ರಭು, ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಶೆಟ್ಟಿ ಉಪಸ್ಥಿತರಿದ್ದರು.

   ಕಾಪು ತಾಲೂಕಿನ ವಿವಿಧ ಪದವಿ ಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.