ಕಾಪು ತಾಲೂಕು ಮಟ್ಟದ 69ನೇ ಕನ್ನಡ ರಾಜ್ಯೋತ್ಸವ ಆಚರಣೆ
(Kaup) ಕಾಪು: ಕಾಪು ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ಬೆಳಿಗ್ಗೆ “69ನೇ ಕನ್ನಡ ರಾಜ್ಯೋತ್ಸವ” ಆಚರಿಸಲಾಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ದ್ವಜಾರೋಹಣಗೈದು ರಾಜ್ಯೋತ್ಸವದ ಸಂದೇಶ ನೀಡಿದರು.
ಕಾಪು ಪ್ರಭಾರ ತಹಶೀಲ್ದಾರರಾದ ಭೀಮ್ ಸೇನ್ ಕುಲಕರ್ಣಿಯವರು ಕನ್ನಡ ಭಾಷೆ, ನಾಡು, ನುಡಿ ಬಗ್ಗೆ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭೆಯ ಮುಖ್ಯಾಧಿಕಾರಿ ನಾಗರಾಜ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾಣೆ, ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್, ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ, ಕಾಪು ಪುರಸಭೆಯ ಸದಸ್ಯರು, ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

