ಕಾಪು ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ವಿಶೇಷ ಸಭೆ
ಶೌರ್ಯ ವಿಭಾಗದ ಯೋಜನಾಧಿಕಾರಿ ಜೈವಂತ್ ಪಟಗಾರರಿಂದ ಉದ್ಘಾಟನೆ
(Kaup) ಕಾಪು: ಕಾಪು ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸಂಯೋಜಕರ ಹಾಗೂ ಘಟಕ ಪ್ರತಿನಿಧಿಗಳ ವಿಶೇಷ ಸಭೆಯನ್ನು ಕೇಂದ್ರ ಕಚೇರಿಯ ಶೌರ್ಯ ವಿಭಾಗದ ಯೋಜನಾಧಿಕಾರಿ ಜೈವಂತ್ ಪಟಗಾರರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶೌರ್ಯ ಕಾರ್ಯಕ್ರಮ ಯೋಜನಾಧಿಕಾರಿ ಕಿಶೋರ್ ಕುಮಾರ್, ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಕಾಪು ಕ್ಷೇತ್ರ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ , ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ ಉಪಸ್ಥಿತರಿದ್ದರು.
ಈ ಸಂದರ್ಭ ಕಾಪು ತಾಲೂಕು ಸಮಿತಿಯ ಸಂಯೋಜಕರು, ಘಟಕ ಪ್ರತಿನಿಧಿಗಳು ಭಾಗವಹಿಸಿದ್ದರು.

