• Home  
  • ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Prize distribution Ceremony at Kaup Dandatheertha School)
- ಶಾಲಾ ಕಾಲೇಜು

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Prize distribution Ceremony at Kaup Dandatheertha School)

Share: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Uliyaragoli, Kaup) ಉಳಿಯಾರಗೋಳಿ, ಕಾಪು : ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯಲ್ಲಿ ಜರಗಿದ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಬಹುಮಾನ ವಿತರಣಾ ಸಮಾರಂಭವು ಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.        ಮುಖ್ಯ ಅತಿಥಿಯಾಗಿ ಕಾಪು ಆರಕ್ಷಕ ಠಾಣೆಯ ಠಾಣಾಧಿಕಾರಿ ಅಬ್ದುಲ್ ಖಾದರ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಬಹುಮಾನಗಳನ್ನು ವಿತರಿಸಿದ ಬಳಿಕ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಶಿಸ್ತು […]

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ

(Uliyaragoli, Kaup) ಉಳಿಯಾರಗೋಳಿ, ಕಾಪು : ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯಲ್ಲಿ ಜರಗಿದ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಬಹುಮಾನ ವಿತರಣಾ ಸಮಾರಂಭವು ಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

       ಮುಖ್ಯ ಅತಿಥಿಯಾಗಿ ಕಾಪು ಆರಕ್ಷಕ ಠಾಣೆಯ ಠಾಣಾಧಿಕಾರಿ ಅಬ್ದುಲ್ ಖಾದರ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅವರು ಬಹುಮಾನಗಳನ್ನು ವಿತರಿಸಿದ ಬಳಿಕ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಶಿಸ್ತು ಭವಿಷ್ಯದ ಜೀವನಕ್ಕೆ ಅಡಿಗಲ್ಲಾಗುತ್ತದೆ. ಗ್ರಾಮೀಣ ಪರಿಸರದ ಈ ವಿದ್ಯಾಸಂಸ್ಥೆ ಎಲ್ಲಾ ರೀತಿಯ ಸೌಕರ್ಯಗಳನ್ನು ಹೊಂದಿದ್ದು, ವಿಭಿನ್ನವಾಗಿ ತನ್ನ ಛಾಪನ್ನು ಮೂಡಿಸಿದೆ. ವಿದ್ಯಾರ್ಥಿಗಳೇ, ತಮ್ಮ ಭವಿಷ್ಯವನ್ನು ಸುಂದರವಾಗಿ ರೂಪಿಸಿಕೊಳ್ಳಿ ಎಂಬ ಸಂದೇಶ ನೀಡಿದರು.

  ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿಯವರು ಮಾತನಾಡಿ, ನನ್ನ ಮೂರು ಮಕ್ಕಳು ಇಲ್ಲಿನ ಹಳೆ ವಿದ್ಯಾರ್ಥಿಗಳಾಗಿದ್ದು, ಅವರು ತಮ್ಮ ಬದುಕನ್ನು ಉತ್ತಮವಾಗಿ ಕಟ್ಟಿಕೊಂಡಿದ್ದಾರೆ. ಅದಕ್ಕೆ ಮೂಲ ಕಾರಣ ಈ ಶಾಲೆಯ ಕಲಿಕೆ. ವಿವಿಧ ರಂಗದಲ್ಲಿ ಹೆಸರುವಾಸಿಯಾದ ಶಾಲೆಯ ಹೆಸರು ಇನ್ನಷ್ಟು ಪಸರಿಸಲಿ ಎಂದರು.

    ಸಮಾರಂಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್, ಪ್ರಾಂಶುಪಾಲ ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥರುಗಳಾದ ಗೇಬ್ರಿಯಲ್ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ರಾಜಲಕ್ಷ್ಮಿ ಜಿ. ರಾವ್, ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಮಂಜುಳಾ ರಘುರಾಮ ಶೆಟ್ಟಿ, ಸುಮಲತಾ ಉಪಸ್ಥಿತರಿದ್ದರು.

    ವಿದ್ಯಾರ್ಥಿ ನಾಯಕರಾದ ಶಮಾ ಯು. ನಾಯಕ್ ಸ್ವಾಗತಿಸಿದರು.   ಶಿಕ್ಷಕಿಯರಾದ ವಾಣಿ ಹಾಗೂ ಪ್ರಮೀಳ ನಿರೂಪಿಸಿದರು. ಸುಮಿತ್ ಹುನ್ನಳ್ಳಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.